ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯ ಬಸಪ್ಪ ಹರಿಜನ ಹತ್ಯೆಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಪರಪ್ಪನ ಅಗ್ರಹಾರ ಬಳಿಯ ಹುಸ್ಕೂರ್ ರಸ್ತೆಯ ಲಾಡ್ಜ್ವೊಂದರಲ್ಲಿ ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರದ ತಾಹೀರ್ ಹುಸೇನ್ ಅಲಿಯಾಸ್ ಅನೂಪ್ ಗೌಡ ಬಂಧಿತ. ಹುಸ್ಕೂರು ರಸ್ತೆಯ ಲಾಡ್ಜ್ ವೊಂದರಲ್ಲಿ ಇದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ರಾಜು ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈತನಿಂದ ಒಂದು ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ ಮೂರು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ತಿಳಿಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಸಪ್ಪ ಹರಿಜನ ಕೊಲೆ ಪ್ರಕರಣದ ಹಿಂದಿನ ರಹಸ್ಯ ಹೊರಹಾಕಿದ್ದಾನೆ. ಜತೆಗೆ ಕೃತ್ಯಕ್ಕೆ ಪಿಸ್ತೂಲ್ ಪೂರೈಕೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಹೆಚ್ಚಿನ ವಿಚಾರಣೆಗಾಗಿ ಡಿ.16ರವರೆಗೆ ವಶಕ್ಕೆ ಪಡೆಯಲಾಗಿದೆ ಎಂದು ಅವರು ವಿವರಿಸಿ ದ್ದಾರೆ. 2013ರ ಜನವರಿ 1ರಂದು ಬಸಪ್ಪ ಹರಿಜನ ಕೊಲೆ ಮಾಡಲಾಗಿತ್ತು. ಆರು
ಸುತ್ತಿನ ಗುಂಡು ಹಾರಿಸಿ ನಂತರ ಕತ್ತು ಕೊಯ್ದು ಕೊಲೆ ಮಾಡಲಾ ಗಿತ್ತು ಎಂದು ಸತೀಶ್ ಕುಮಾರ್ ತಿಳಿಸಿದ್ದಾರೆ.