Advertisement

ಸರ್ಕಾರಿ ಕೆಲಸದ ಆಸೆ ತೋರಿಸಿ ವಂಚಿಸುತ್ತಿದ್ದವನ ಸೆರೆ

06:00 AM Mar 08, 2019 | Team Udayavani |

ಬೆಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಹಲವರಿಗೆ ವಂಚಿಸಿದ ಆರೋಪ ಪ್ರಕರಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷನನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

Advertisement

ಗದಗ ಜಿಲ್ಲೆ ನರಗುಂದದ ಶ್ರೀ ಸಿದ್ಧಲಿಂಗೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೀರನಗೌಡ ಬಸವನಗೌಡ ಪಾಟೀಲ  ಬಂಧಿತ ಆರೋಪಿ. ಆರೋಪಿಯು ಕಳೆದ ಮೂರು ವರ್ಷಗಳಿಂದ ಸರ್ಕಾರಿ ಕೆಲಸ ಕೊಡಿಸುವುದಾಗಿ ಹಲವು ಮಂದಿ ಉದ್ಯೋಕಾಂಕ್ಷಿಗಳಿಂದ 80ಲಕ್ಷ ರೂ.ಗಳಿಗೂ ಅಧಿಕ ಹಣ ಪಡೆದು, ವಾಪಾಸ್‌ ಕೊಡದೆ ವಂಚಿಸಿರುವುದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀ ಸಿದ್ಧಲಿಂಗೇಶ್ವರ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದ ವೀರನಗೌಡ, ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದ. ಬಳಿಕ ಅವರನ್ನು ಬೆಂಗಳೂರಿಗೆ ಕರೆಸಿ ಪ್ರತಿಷ್ಠಿತ ಹೋಟೆಲ್‌ಗ‌ಳಲ್ಲಿ ಚರ್ಚೆ ನಡೆಸುತ್ತಿದ್ದ. ಒಂದು ಹುದ್ದೆಗೆ 2ರಿಂದ ಐದು ಲಕ್ಷ ರೂ. ಪಡೆದು ಬಳಿಕ ಉದ್ಯೋಗ ಕೊಡಿಸದೆ, ಹಣವನ್ನೂ  ವಾಪಸ್‌ ನೀಡದೆ ವಂಚನೆ ಮಾಡುತ್ತಿದ್ದ.

ಆರೋಪಿಯಿಂದ ವಂಚನೆಗೊಳಗಾದ 15 ಮಂದಿ, ಫೆಬ್ರವರಿಯಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನತಾ ದರ್ಶನದಲ್ಲಿ ಪಾಲ್ಗೊಂಡು, ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದರು. ಇದಾದ ಬಳಿಕ ಮಾ.7ರಂದು ಕನಕಪುರ ಮೂಲದ ಶಿವು ಎಂಬಾತ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. ತನಿಖೆ ಮುಂದುವರಿಸಿದ ಅಧಿಕಾರಿಗಳು, ಆರೋಪಿ ವೀರನಗೌಡನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next