Advertisement

Kanakpura: ಮಹಿಳೆ ಸ್ನಾನದ ದೃಶ್ಯ ಸೆರೆ ಹಿಡಿದು ವಾಟ್ಸಾಪ್‌ನಲ್ಲಿ ಬಿಟ್ಟ 

01:38 PM Aug 22, 2023 | Team Udayavani |

ಕನಕಪುರ: ಮಹಿಳೆಯೊಬ್ಬರು ಸ್ನಾನ ಮಾಡುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ನಗರದ ಮೇಳೆಕೋಟೆಯ ಧನ್‌ರಾಜ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ.17ರಂದು ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಸ್ನಾನ ಮಾಡುತ್ತಿದ್ದ ವಿಡಿಯೋ ತುಣುಕು ಇದೆ ಎಂದು ತಿಳಿದು ಬಂದಿದೆ.

ಈ ಮಾಹಿತಿ ಮೇರೆಗೆ ನಾನು ಪರಿಶೀಲಿಸಿದಾಗ “ನಾನು ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಧನ್‌ರಾಜ್‌ ಎಂಬಾತ ನನಗೆ ಗೊತ್ತಿಲ್ಲದಂತೆ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ನನ್ನ ಘನತೆಗೆ ಧಕ್ಕೆ ತಂದ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮಹಿಳೆ  ದೂರು ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next