Advertisement

ಮರಕ್ಕೆ ಢಿಕ್ಕಿ ಹೊಡೆದ ಕಾರು: ಗೋವಾದಲ್ಲಿ ಬೆಳಗಾವಿ ಮೂಲದ ಮೂವರು ಸಾವು

10:53 AM May 22, 2022 | Team Udayavani |

ಪಣಜಿ: ಗೋವಾದ ಮಾಪ್ಸಾದಲ್ಲಿ ಭಾನುವಾರ ಮುಂಜಾನೆ ಸ್ವಿಫ್ಟ್‌ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದ ಬೆಳಗಾವಿ ಮೂಲದ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಅನಗೋಳಕರ್ (28), ರೋಹನ್ ಗದಗ (26), ಸನ್ನಿ ಅಣವೇಕರ್ (31) ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿದ್ದ ವಿಶಾಲ ಕಾರೇಕರ್ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದ ಎಸ್ ಯುವಿ: ಮದುವೆ ಮನೆಯಿಂದ ಬರುತ್ತಿದ್ದ 8 ಮಂದಿ ಸಾವು!

ಬೆಳಗಿನ ಜಾವ ಸುಮಾರು 4 ಗಂಟೆಯ ವೇಳೆ ಮಾಪ್ಸಾದ ಕುಚೇಲಿಯಲ್ಲಿ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ವಿಶಾಲ್ ರವರನ್ನು ಗೋವಾದ ಬಾಂಬೋಲಿಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next