Advertisement

ಪಂಪ್ ವೆಲ್ ಡಿವೈಡರ್ ದಾಟಿದ ಕಾರು ಇನ್ನೊಂದು ಕಾರಿಗೆ ಡಿಕ್ಕಿ ಇಬ್ಬರು ಗಂಭೀರ

10:06 AM Feb 09, 2020 | sudhir |

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪಂಪ್ ವೆಲ್ ಬಳಿ ಇಂಡಿಯಾನಾ ಆಸ್ಪತ್ರೆಯ ಬಳಿ ಶನಿವಾರ ಸಂಜೆ ಸಂಭವಿಸಿದೆ.

Advertisement

ಮಂಗಳೂರು ಕಡೆಯಿಂದ ಕಾಸರಗೋಡಿನ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿ ಎದುರಿನಿಂದ ಬರುತಿದ್ದ ಡಸ್ಟರ್ ಕಾರಿಗೆ ಡಿಕ್ಕಿ ಹೊಡೆದಿದೆ, ಘಟನೆಯಲ್ಲಿ ಎರಡು ಕಾರುಗಳು ನಜ್ಜುಗುಜ್ಜಾಗಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next