Advertisement

ಕಾರು- ಏಸ್‌ ಗೂಡ್ಸ್‌ ವಾಹನ ಢಿಕ್ಕಿ: ಇಬ್ಬರು ಗಂಭೀರ

12:26 AM Jun 28, 2023 | Team Udayavani |

ಉಡುಪಿ: ವಿರುದ್ದ ದಿಕ್ಕಿನಲ್ಲಿ ಬಂದ ಕಾರೊಂದನ್ನು ತಪ್ಪಿಸಲು ಹೋಗಿ ಇನ್ನೋವಾ ಕಾರು, ಏಸ್‌ ಗೂಡ್ಸ್‌ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಉಡುಪಿ-ಮಣಿಪಾಲ ರಸ್ತೆಯ ಕುಂಜಿಬೆಟ್ಟುವಿನ ಹೊಂಡಾ ಶೋ ರೂಂ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಏಸ್‌ ಗೂಡ್ಸ್‌ ವಾಹನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಏಕಾಏಕಿಯಾಗಿ ವಿರುದ್ದ ದಿಕ್ಕಿನಲ್ಲಿ ಮಹಿಳೆಯೊಬ್ಬರು ಚಲಾಯಿಸಿ ಕೊಂಡು ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ಅದೇ ದಾರಿಯಲ್ಲಿ ಚಲಿಸುತ್ತಿದ್ದ ಏಸ್‌ ಗೂಡ್ಸ್‌ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಏಸ್‌ ವಾಹನದಲ್ಲಿದ್ದ ಮೂವರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯಿಂದ ಸ್ವಲ್ಪ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ಥವಾಗಿದ್ದು ಸ್ಥಳೀಯರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next