Advertisement

ಕಾರು, ಬಸ್ ಭೀಕರ ಅಪಘಾತ; ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಸಾವು

09:18 AM Jul 28, 2019 | Nagendra Trasi |

ಮಂಡ್ಯ: ಕಾರು, ಬಸ್ ಭೀಕರ ಅಪಘಾತದಲ್ಲಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಗೆಜ್ಜಲಗೆರೆ ಎಂಬಲ್ಲಿ ಶನಿವಾರ ನಡೆದಿದೆ.

Advertisement

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಕಾರಿನಲ್ಲಿದ್ದ ಮಂಜುಳಾ (28ವರ್ಷ), ರವಿ(31ವರ್ಷ), ಸಾಗರ್ (8ವರ್ಷ) ಹಾಗೂ ಸುಕನ್ಯಾ(6ವರ್ಷ) ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ. ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದು, ಕೆಎಸ್ ಆರ್ ಟಿಸಿ ಬಸ್ ಬೆಂಗಳೂರು ಕಡೆ ತೆರಳುತ್ತಿರುವುದಾಗಿ ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next