ಕೇರಳ : ಕೇರಳದ ಕಣ್ಣೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಗರ್ಭಿಣಿ ಮಹಿಳೆ ಸೇರಿ ದಂಪತಿಗಳು ಸಜೀವ ದಹನಗೊಂಡ ಘಟನೆ ಗುರುವಾರ ನಡೆದಿದೆ.
ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಏಕಾಏಕಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಗು ಸೇರಿದಂತೆ ನಾಲ್ವರು ಪಾರಾಗಿದ್ದಾರೆ. ಎದುರು ಸೀಟಿನಲ್ಲಿ ಕುಳಿತ್ತಿದ್ದ ಮಹಿಳೆ ಹಾಗೂ ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯ ಗಂಡ ಬಾಗಿಲು ತೆರೆಯಲಾಗದೆ ಸಜೀವ ದಹನಗೊಂಡಿದ್ದಾರೆ.
ಈ ವೇಳೆ ಅಕ್ಕಪಕ್ಕದ ಜನರು ಸ್ಥಳಕ್ಕೆ ಬಂದು ರಕ್ಷಣೆಗೆ ಮುಂದಾದರೂ ಬೆಂಕಿಯ ಜ್ವಾಲೆ ಇಡೀ ಕಾರನ್ನೇ ಆವರಿಸಿದ ಪರಿಣಾಮ ನಿಸ್ಸಹಾಯಕರಾಗಿದ್ದರು ಎನ್ನಲಾಗಿದೆ.
ಸದ್ಯ ಕಾರಿನಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಯಾವುದೇ ಪ್ರಾಣಾಪಾಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: 500 ಹುಡುಗಿಯರ ಜೊತೆ ಪರೀಕ್ಷೆಗೆ ಕೂತ ಏಕೈಕ ವಿದ್ಯಾರ್ಥಿ: ಅಷ್ಟೂ ಹುಡುಗಿಯರನ್ನು ನೋಡಿ ಮೂರ್ಛೆ ಹೋದ.!