ತೆಕ್ಕಟ್ಟೆ: ತೆಕ್ಕಟ್ಟೆ ರಾ.ಹೆ. 66 ಶ್ರೀ ಮಹಾಲಿಂಗೇಶ್ವರ ದೇವಳದ ಸಮೀಪ ಬೈಕ್‌ಗೆ ಮಾರುತಿ 800 ಕಾರು ಢಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜ.31ರ ಸಂಜೆ ಸಂಭವಿಸಿದೆ.
ಕೋಟದಿಂದ ಕೋಟೇಶ್ವರ ಕಡೆಗೆ ಸಾಗುತ್ತಿದ್ದ ಮಾರುತಿ 800 ಕಾರು ನೇರವಾಗಿ ಬಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಣೂರು ನಿವಾಸಿ ದಾರುಅಜ್ಜಿಮನೆ ಆನಂದ ಕಾಂಚನ್ (62) ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಹಿಂಬದಿ ಸವಾರ ರತ್ನಾಕರ ದೇವಾಡಿಗ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ತತ್ ಕ್ಷಣವೇ ಸ್ಥಳೀಯರು ಕೋಟೇಶ್ವರ ಖಾಸಗಿ ಆಸ್ಪತೆಗೆ ಸಾಗಿಸಿದ್ದಾರೆ.
ಮಾನವೀಯತೆ ಮೆರೆದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ:
ತೆಕ್ಕಟ್ಟೆ ರಾ.ಹೆ.66 ರ ಪ್ರಮುಖ ಭಾಗದಲ್ಲಿ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಲವಾರು ಮಂದಿ ಒಂದೆಡೆ ನೆರೆದಿದ್ದರು. ಈ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು ತತ್‌ಕ್ಷಣವೇ ಘಟನಾ ಸ್ಥಳಕ್ಕೆ ಬಂದು ಸಾರ್ವಜನಿಕರಿಂದ ಮಾಹಿತಿ ಪಡೆದು ಕೋಟ ಪೊಲೀಸ್ ಠಾಣಾ ಗಮನಕ್ಕೆ ತರುವ ಮೂಲಕ ಮಾನವೀಯತೆ ಮೆರೆದಿದ್ದಾರೆ.