ಚಿಕ್ಕಬಳ್ಳಾಪುರ: ತಾಲೂಕಿನ ಜಾತಿವಾರ ಹೊಸಹಳ್ಳಿ ರೈಲ್ವೆ ಕೆಳಸೇತುವೆಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನಿಬ್ಬರು ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಕೆ.ಆರ್.ಪುರದ ಅರುಣ್ (39),ಸೋಮೇನಹಳ್ಳಿಯ ವರಲಕ್ಷ್ಮಿ(25) ಎನ್. ಆರ್.ಐ ಲೇಔಟ್‌ನ ಶಿವಕುಮಾರ್ (29) ಮೃತಪಟ್ಟ ದುರ್ದೈವಿಗಳು.
ಇದನ್ನೂ ಓದಿ:ಧಾರವಾಡ- ಬೆಳಗಾವಿ ರೈಲು ಮಾರ್ಗ ನಿರ್ಮಾಣಕ್ಕೆ ಧಾರವಾಡ ಹೈಕೋರ್ಟ್ ತಡೆ
ಇನ್ನೂ ವಾಪ್ಸಂದ್ರದ ಚಂದ್ರಶೇಖರ್(43 ) ಅರುಣ ಚಂದ್ರಶೇಖರ್ (39) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಗೌನಪಲ್ಲಿ ಗ್ರಾಮದಲ್ಲಿ ಸಂಬಂಧಿಕರ ಮನೆಗೆ ತೆರಳಿ ವಾಪಸ್ ಬರುವ ವೇಳೆಯಲ್ಲಿ ಜಾತಿವಾರ ಹೊಸಹಳ್ಳಿ ಬಳಿ ಇರುವ ರೈಲ್ವೆ ಕೆಳ ಸೇತುವೆಗೆ ಕಾರು ಢಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ವಾಸುದೇವ್ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.