Advertisement

ಪಂಕ್ಚರ್ ಆಗಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಇನ್ನೋವಾ ಕಾರು: ಸ್ಥಳದಲ್ಲೇ ಇಬ್ಬರ ಸಾವು

10:08 AM Apr 01, 2022 | Team Udayavani |

ಚಿತ್ರದುರ್ಗ: ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಇನ್ನೋವಾ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೀಬಾರ ಬಳಿ ನಡೆದಿದೆ.

Advertisement

ಮೃತರನ್ನು ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿಗಳಾದ ಶಿವರಾಮ್ (45 ವರ್ಷ) ಹಾಗೂ ಚೇತನ್ ಕುಮಾರ್ (30 ವರ್ಷ) ಎಂದು ಗುರುತಿಸಲಾಗಿದೆ.

ಗಾಯಳು ಸ್ವಾಮಿ ಎಂಬುವವರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿ ಬೆಳ್ಮಣ್‌ನಲ್ಲಿ ಮತ್ತೆ ಟೋಲ್‌ ಗುಮ್ಮ!

ಶುಕ್ರವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸೀಬಾರ ಬಳಿ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಟಯರ್ ಪಂಕ್ಚರ್ ಆಗಿದ್ದ ಲಾರಿಯೊಂದು ನಿಧಾನವಾಗಿ ಚಲಿಸುತ್ತಿತ್ತು. ಇದೇ ಸಮಯದಲ್ಲಿ ದಾವಣಗೆರೆ ಕಡೆಯಿಂದ ವೇಗವಾಗಿ ಬಂದ ಇನ್ನೋವಾ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ಮೂರು ಜನ ಗೋವಾಕ್ಕೆ ಹೋಗಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಭೀಕರ ಅವಘಡ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next