ಅಳೇಕಲ ನಿವಾಸಿ ಅಬ್ಟಾಸ್(58) ಮೃತರು.
Advertisement
ಅಬ್ಟಾಸ್ ಅವರು ಶನಿವಾರ ಬೆಳಗ್ಗೆ ಮಗ ನೌಶಾದ್ ಜತೆ ಸ್ಕೂಟರ್‌ನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದಾಗ ಚೆಂಬುಗುಡ್ಡೆ ಬಳಿ ಕಾರು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಅಬ್ಟಾಸ್ ಅವರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನೌಶಾದ್ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.