Advertisement
ಅವರು ಕಸ್ಬಾದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಬೆಳಗ್ಗೆ ಶಾಲೆಗೆಂದು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಸೋಮೇಶ್ವರ ಪಿಲಾರು ದಾರಂದಬಾಗಿಲಿನ ನಿವಾಸಿಯಾಗಿರುವ ಅವರು ಉಳ್ಳಾಲ ಠಾಣೆಯ ಎಎಸ್‌ಐ ಮಹಮ್ಮದ್ ಅವರ ಪತ್ನಿ. ಮೃತರು ಪತಿ, ಇಬ್ಬರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ.
ಶಿಕ್ಷಕಿ ಶಾಹಿದಾ ಅವರ ನಿಧನಕ್ಕೆ ಬೆಂಗರೆ ಜಮಾತ್‌ನ ಅಧ್ಯಕ್ಷ ಬಿಲಾಲ್ ಮೊದಿನ್ ಮತ್ತು ಸ್ಥಳೀಯ ಕಾರ್ಪೊರೆಟರ್ ಮುನೀಬ್ ಬೆಂಗರೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.