Advertisement

ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

10:12 AM Nov 01, 2019 | sudhir |

ಕಲಬುರಗಿ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದು
ಕಾರಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಜೀವನಗಿ ಗ್ರಾಮದ ಬಳಿ ನಡೆದಿದೆ. ‌

Advertisement

ಬೀದರ್ ನಿಂದ ಕಲಬುರಗಿ ಕಡೆಗೆ ಆಗಮಿಸುವ ವೇಳೆ ಈ ದುರ್ಘಟನೆ ನಡೆದಿದ್ದು, ಪ್ರಿಯಾಂಕಾ (20), ಕಮಲಾಬಾಯಿ (55) ಎಂಬುವವರು ಮೃತ ಪಟ್ಟಿದ್ದಾರೆ.

ಕಾರಲ್ಲಿದ್ದ ಉಳಿದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇವರೆಲ್ಲರೂ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೇಡಕುಂದಾ ಗ್ರಾಮದವರಾಗಿದ್ದಾರೆ. ಕಾಳಗಿ ತಾಲೂಕಿನ ರಟಗಲ್ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ.

Advertisement

ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next