Advertisement

ಬೀದರ್: ಕಾರು – ಕಂಟೇನರ್‌ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

07:33 PM Aug 15, 2022 | Team Udayavani |

ಬೀದರ್:‌ ಕಾರು ಹಾಗೂ ಕಂಟೇನರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ  ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಭಂಗೂರ್ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ನಡೆದಿದೆ.

Advertisement

ಮೃತಪಟ್ಟವರೆಲ್ಲರು ಹೈದ್ರಾಬಾದ್‌ನ ಬೇಗಂಪೇಟ್ ನಿವಾಸಿಗಳಾಗಿದ್ದು, ಗುರುತು ಪತ್ತೆಯಾಗಬೇಕಿದೆ.

ಇದನ್ನೂ ಓದಿ: ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲು ವಾಹನ – ಕಾರು ಮುಖಾಮುಖಿ ಢಿಕ್ಕಿ

ಹೈದ್ರಾಬಾದ್‌ನಿಂದ ಹುಮನಾಬಾದ್ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಕಾರಿನ ವೇಗ ಹೆಚ್ಚಿದ್ದರಿಂದ ಸಂಪೂರ್ಣ ನುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ವಾಹನದಲ್ಲಿದ್ದ ಇನ್ನೂ ಮೂವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನ್ನಳ್ಳಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next