Advertisement

ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಮೂವರು ಮಹಿಳೆಯರು ಸೇರಿ ಏಳು ಮಂದಿ ಸ್ಥಳದಲ್ಲೇ ಸಾವು

04:23 PM May 07, 2022 | Team Udayavani |

ಉತ್ತರ ಪ್ರದೇಶ : ಜಿಲ್ಲೆಯ ನೌಜಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇ 68 ರಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಮಹಿಳೆಯರು ಸೇರಿ ಒಟ್ಟು ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

Advertisement

ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು ವಿವಾಹ ಸಮಾರಂಭಕ್ಕೆ ತೆರಳಿ ದೆಹಲಿಯಿಂದ ಆಗ್ರಾಕ್ಕೆ ವಾಪಸು ಬರುತ್ತಿದ್ದ ವೇಳೆ ಶನಿವಾರ ಮುಂಜಾನೆ 5 ಗಂಟೆಯ ಸುಮಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಅವಘಡ ಸಂಭವಿಸಿದೆ.

ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಥುರಾ ಜಿಲ್ಲಾಸ್ಪತ್ರೆಗೆ ರವಾನಿಸಿದರು. ಕಾರು ದೆಹಲಿಯಿಂದ ಆಗ್ರಾಕ್ಕೆ ಹೋಗುತ್ತಿತ್ತು. ಈ ವೇಳೆ ಅಪರಿಚಿತ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ ಮಗುವೊಂದು ಸೇರಿ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಎಸ್‌ಪಿ ದೇಹತ್ ಶ್ರೀಶ್ ಚಂದ್ ತಿಳಿಸಿದ್ದಾರೆ.

ಸಂತಾಪ :
ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next