Advertisement

ಡಿವೈಡರ್ ಗೆ ಗುದ್ದಿ ಟೆಂಪೋ ಟ್ರಾವೆಲ್ಲರ್ ಗೆ ಢಿಕ್ಕಿಯಾದ ಕಾರು: ಇಬ್ಬರು ಸಾವು, 8ಮಂದಿಗೆ ಗಾಯ

08:42 AM Jun 04, 2022 | Team Udayavani |

ಕುಣಿಗಲ್: ಇನ್ನೋವಾ ಕಾರೊಂದು ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದು ಪಕ್ಕದಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರಾವಲ್ಸ್ ಗೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 75 ಹೇರೂರು ಬೈಪಾಸ್ ನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

Advertisement

ಇನ್ನೋವಾ ಕಾರು ಚಾಲಕ ಹಾಸನ ಜಿಲ್ಲೆ ಹೊಳೇನರಸೀಪುರ ತಾಲೂಕಿನ ಸುನೀಲ್ (30) ಮೃತಪಟ್ಟ ದುರ್ದೈವಿಯಾಗಿದ್ದು, ಮತ್ತೊಬ್ಬನ ಹೆಸರು ಇನ್ನಷ್ಟೇ ತಿಳಿದು ಬರಬೇಕಿದೆ.

ಇದನ್ನೂ ಓದಿ:ಏನಿದು ಸ್ವಯಂ ಮದುವೆ? ಹೊರದೇಶಗಳಲ್ಲಿ ಈ ಟ್ರೆಂಡ್‌ ಹೇಗಿದೆ?

ಇನ್ನೋವಾ ಕಾರು ಬೆಂಗಳೂರಿನಿಂದ ಹಾಸನ ಕಡೆ ಹೊರಟ್ಟಿದ್ದು, ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದಿಂದ ಬೆಂಗಳೂರು ಮದುವೆಗೆ ಹೊರಟ್ಟಿದ್ದ ಟೆಂಪೋ ಟ್ರಾವಲ್ಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಬವಿಸಿದೆ ಎನ್ನಲಾಗಿದೆ.

Advertisement

ಗಾಯಾಳುಗಳನ್ನು ಅದಿಚುಂಚನಗಿರಿ ಆಸ್ಪತ್ರೆ ದಾಖಲಿಸಲಾಗಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next