Advertisement

ಅಪಘಾತವಾಗಿ ತಪ್ಪಿಸಿಕೊಳ್ಳುವ ಆತುರದಲ್ಲಿ ನಾಲೆಗೆ ಇಳಿದ ಕಾರು! ತಪ್ಪಿದ ಭಾರೀ ಅನಾಹುತ

12:29 PM Oct 10, 2021 | Team Udayavani |

ಚಿಕ್ಕಮಗಳೂರು: ಅಪಘಾತವಾಗಿ ತಪ್ಪಿಸಿಕೊಳ್ಳುವ ಆತುರದಲ್ಲಿ ಕಾರೊಂದು ನಾಲೆಗೆ ಇಳಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಲಕ್ಕವಳ್ಳಿ ಗ್ರಾಮದ ತಿರುವಿನಲ್ಲಿ ಕಾರು-ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ, ಪರಿಣಾಮ ಬೈಕ್ ಸವಾರ ಬೈಕಿನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಗಾಬರಿಯಿಂದ ಕಾರು ಚಾಲಕ ತಪ್ಪಿಸಿಕೊಳ್ಳಲು ಯತ್ನಿಸಿ ಗಲ್ಲಿ ರಸ್ತೆಗಳಲ್ಲಿ ಸಂಚಾರಿಸುವಾಗ ನಿಯಂತ್ರಣ ತಪ್ಪಿ ಕಾರು ನಾಲೆಗೆ ಇಳಿದಿದೆ.

ಇದನ್ನೂ ಓದಿ:ಅಪಘಾತ ಹೆಚ್ಚಳ ತಡೆಗೆ ರಾತ್ರಿ ವಾಹನ ತಪಾಸಣಿ

ಬೈಕಿನಿಂದ ಬಿದ್ದವರಿಗೂ ಏನೂ ಆಗಿರಲಿಲ್ಲ. ನಾಲೆಯಲ್ಲಿ ನೀರು ನಿಲ್ಲಿಸಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಕಾರಿನಲ್ಲಿದ್ದವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಕ್ಕವಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next