Advertisement

ನದಿಗೆ ಬಿದ್ದ ಕಾರು: ಒಂಬತ್ತು ಮಂದಿ ಸಾವು; ಇಬ್ಬರ ರಕ್ಷಣೆ

09:41 AM Jul 08, 2022 | Team Udayavani |

ನೈನಿತಾಲ್: ಎರ್ಟಿಗಾ ಕಾರು ನದಿಗೆ ಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್ ರಾಜ್ಯದ ನೈನಿತಾಲ್ ಜಿಲ್ಲೆಯ ರಾಮನಗರ ಎಂಬಲ್ಲಿ ನಡೆದಿದೆ. ವಾಹನದಲ್ಲಿ 11 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

Advertisement

ಮೃತರೆಲ್ಲರೂ ಪಂಜಾಬ್ ಮೂಲದವರು ಎನ್ನಲಾಗಿದೆ. ಉತ್ತರಾಖಂಡ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಮತ್ತು ಅಗ್ನಿಶಾಮಕ ತಂಡವು ಸ್ಥಳಕ್ಕೆ ಧಾವಿಸಿದೆ.

ರಾಮನಗರ ಕೋಟ್‌ದ್ವಾರ ರಸ್ತೆಯಲ್ಲಿರುವ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಧೇಲಾ ವಲಯದಲ್ಲಿ ಅಪಘಾತ ಸಂಭವಿಸಿದೆ.11 ಪ್ರಯಾಣಿಕರ ಪೈಕಿ ಇಬ್ಬರನ್ನು ರಕ್ಷಿಸಲಾಗಿದೆ. ಉಳಿದ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆಂದು ಸ್ಥಳೀಯಾಡಳಿತ ದೃಢಪಡಿಸಿದೆ.

ಎರ್ಟಿಗಾ ಕಾರು ಬೆಳಿಗ್ಗೆ ಐದು ಗಂಟೆ ಸುಮಾರಿಗೆ ಕಾರ್ಬೆಟ್ ಕಡೆಗೆ ಹೋಗುತ್ತಿತ್ತು. ವೇಗವಾಗಿ ಬಂದ ಕಾರನ್ನು ನಿಲ್ಲಿಸಲು ಯತ್ನಿಸಿದರೂ ನಿಲ್ಲಿಸಲಿಲ್ಲ. ನಂತರ ಧೇಲಾ ಗ್ರಾಮದ ನದಿಯಲ್ಲಿ ಬಲವಾದ ಪ್ರವಾಹದಿಂದಾಗಿ ಹರಿಯುವ ನೀರಿನಲ್ಲಿ ಕಾರು ಕೊಚ್ಚಿಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಭಾಷಣ ಮಾಡುತ್ತಿರುವಾಗಲೇ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ

Advertisement

ಈ ನದಿಗೆ ಸೇತುವೆ ನಿರ್ಮಿಸುವ ಕುರಿತು ಆಡಳಿತದಲ್ಲಿ ಚರ್ಚೆ ನಡೆದಿದ್ದು, ಈ ಹಿಂದೆಯೂ ಇಲ್ಲಿ ಇಂತಹ ಅವಘಡಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next