Advertisement

ಚಾಲಕನ ನಿಯಂತ್ರಣ ತಪ್ಪಿ ಹತ್ತು ಅಡಿ ಆಳದ ಕಂದಕಕ್ಕೆ ಮಗುಚಿದ ಕಾರು

11:17 AM Jun 04, 2019 | Team Udayavani |

ಹಳೆಯಂಗಡಿ: ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಹಳೆಯಂಗಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹತ್ತು ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

Advertisement

ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಪವಾಡಸದೃಶ ರೀತಿಯಲ್ಲಿ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಳ್ಳಾರಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಎಂದು ತಿಳಿದು ಬಂದಿದೆ. ಚಾಲಕನ ನಿದ್ರೆ ಮಂಪರಿನಿಂದ ಈ ಘಟನೆ ನಡೆದಿರಬಹುದು ಎಂದು ಸಂಚಾರಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next