ಉಳ್ಳಾಲ : ನೇತ್ರಾವರಿ ನದಿಗೆ ಕಸವನ್ನು ಎಸೆದ ಬೆಂಗಳೂರು ಮೂಲದ ವಾಹನವನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
ಇಂದು ( ಮೇ 1 ) ರಂದು ನೇತ್ರಾವತಿ ನದಿಗೆ, ನಿಷೇಧವಿದ್ದರೂ, ಬೆಂಗಳೂರು ನೋಂದಾಯಿತ ವಾಹನದಲ್ಲಿದ್ದ ಇಬ್ಬರು ಮಹಿಳೆಯರು ಕಸವನ್ನು ನದಿಗೆ ಯಾವುದೇ ಮುಲಾಜಿಯಿಲ್ಲದೆ ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದನ್ನೂ ಓದಿ : KA 03 NB 4648 Registration ಗಾಡಿಯಲ್ಲಿ ಬಂದ ಮಹಿಳೆಯರ ಈ ಕಾರ್ಯಕ್ಕೆ ಏನೆನ್ನಬೇಕು?
ಈ ಕುರಿತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ತಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹಿಸಿದ್ದರು. ಇದೀಗ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ ಕಂಕನಾಡಿ ನಗರ ಪೋಲಿಸ್ ಠಾಣೆಯಲ್ಲಿ ವಾಹನವನ್ನು ವಶಕ್ಕೆ ಪಡೆದು ,ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
ಮಹಿಳೆಯರಿಬ್ಬರು ಕಸ ಎಸೆಯುವ ದೃಶ್ಯ ಹಿಂಬದಿಯಲ್ಲಿದ್ದ ಕಾರಿನಲ್ಲಿದ್ದ ಕ್ಯಾಮರದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಇಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಾಲತಾಣದಲ್ಲಿ “ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಸ್ಲೋಗನ್ ಮೂಲಕ ಅಕ್ರೋಶ ವ್ಯಕ್ತವಾಗಿತ್ತು.