Advertisement

ಉಚ್ಚಿಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಮೂರು ತುಂಡಾದ ವಿದ್ಯುತ್ ಕಂಬ

03:44 PM Aug 14, 2020 | keerthan |

ಪಡುಬಿದ್ರಿ: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಬಡಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಯಾಣಿ ಹೋಟೆಲ್ ಎದುರು ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

Advertisement

ಕಾರು ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ ವಿದ್ಯುತ್ ಕಂಬ ಮೂರು ತುಂಡಾಗಿ ಬಿದ್ದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೈಕೊಂದು ವಿದ್ಯುತ್ ತಂತಿ ತಾಗಿದ ಪರಿಣಾಮ ಬೈಕು ಮತ್ತುಅದರ ಸವಾರ ಸುಟ್ಟು ಕರಕಲಾದ ಘಟನೆ ಸಂಭವಿಸಿದ್ದು, ಆ ಘಟನೆ ಮಾಸುವ‌ ಮೊದಲೇ‌ ಈ ಘಟನೆ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಇಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next