ಮಳವಳ್ಳಿ: ಕಾರು ಮತ್ತು ಆಟೋ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ಕುಣಿಗಲ್ ಗೇಟ್ ಬಳಿ ಬುಧವಾರ ತಡರಾತ್ರಿ ನಡೆದಿದೆ.
ಬೆಂಗಳೂರು ಮೂಲದ ರವಿಕುಮಾರ್ (50 ವ), ಭಾಸ್ಕರ್ (48 ವ) ಮತ್ತು ಆಟೋ ಚಾಲಕ ಮದ್ದೂರು ತಾಲ್ಲೂಕಿನ ಹುಲಿಗೆರೆ ಗ್ರಾಮದ ಶ್ರೀನಿವಾಸ್ (35 ವ) ಮೃತಪಟ್ಟವವರು.
ರವಿಕುಮಾರ್ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದು, ತಮ್ಮ ಹುಟ್ಟೂರು ತಾಲ್ಲೂಕಿನ ಕಣಿಕಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ವಾಪಸ್ ಬೆಂಗಳೂರಿಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯ ಕಣಿಗಲ್ ಬಳಿ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ:ದುರಂತ; ಒಮಾನ್ ಬೀಚ್ ನಲ್ಲಿ ಪ್ರವಾಸಿಗರ ಕಣ್ಮುಂದೆ ಕೊಚ್ಚಿಕೊಂಡು ಹೋದ ತಂದೆ, ಮಕ್ಕಳು
ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರು ಸಹ ಜಖಂಗೊಂಡಿದೆ.
ಸ್ಥಳಕ್ಕೆ ಡಿವೈಎಸ್ಪಿ ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ