ಕುಂದಾಪುರ : ಕಾರೊಂದು ಬಸ್ಸಿಗೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಮೂವರು ಗಾಯಗೊಂಡ ಘಟನೆ ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ನಾವುಂದದಲ್ಲಿ ಮಂಗಳವಾರ ನಡೆದಿದೆ.
ಬಸ್ ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿತ್ತು. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್ಸಿಗೆ ಢಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿ.ಎಸ್.ಐ ಪವನ್ ನಾಯಕ್ ಭೇಟಿ ನೀಡಿದ್ದು, ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.
ಗಾಯಾಳಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಗಂಗೊಳ್ಳಿ 24x 7 ಚಾಲಕ ಕೃಷ್ಣ ನೆರವಾದರು. ಗಾಯಾಳುಗಳ ಗುರತು ಪತ್ತೆ ಇನ್ನಷ್ಟೇ ಲಭ್ಯವಾಗಬೇಕಿದೆ.