Advertisement

Alappuzha: ಬಸ್‌ ಗೆ ಡಿಕ್ಕಿ ಹೊಡೆದ ಕಾರು; ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾ*ವು

09:18 AM Dec 03, 2024 | Team Udayavani |

ಆಲಪ್ಪು: ವೈದ್ಯ ವಿದ್ಯಾರ್ಥಿಗಳಿದ್ದ ಕಾರು ಸರ್ಕಾರಿ ಬಸ್‌ ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುವಿನಲ್ಲಿ ಸೋಮವಾರ (ಡಿ.02) ರಾತ್ರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಸೋಮವಾರ ರಾತ್ರಿ ಅಲಪ್ಪು ಜಿಲ್ಲೆಯಲ್ಲಿ ಸರ್ಕಾರಿ ಸ್ವಾಮ್ಯದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಪ್ರಯಾಣಿಕ ಬಸ್‌ಗೆ ಅವರ ಕಾರು ಡಿಕ್ಕಿ ಹೊಡೆದಿದೆ. ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಏಳು ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳ ತಂಡವೊಂದು ಟವೇರಾ ಕಾರಿನಲ್ಲಿ ಅತಿವೇಗದಲ್ಲಿ ಸಾಗುತ್ತಿತ್ತು ಎನ್ನಲಾಗಿದೆ.

ಅಪಘಾತದ ಭೀಕರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ದೃಶ್ಯಗಳಲ್ಲಿ ಕಾರು ಜಖಂ ಆಗಿದ್ದು, ಕನ್ನಡಿಗಳು ಛಿದ್ರಗೊಂಡಿದೆ. ಬಸ್‌ ನ ಬಾನೆಟ್ ಹಾನಿಗೊಳಗಾಗಿರುವುದನ್ನು ಕಾಣಬಹುದು.

ಮೃತರನ್ನು ಮಹಮ್ಮದ್, ಮುಹಾಸಿನ್, ಇಬ್ರಾಹಿಂ, ದೇವಾನಂದ್ ಮತ್ತು ಶ್ರೀದೀಪ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಐವರಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಇತರ ಇಬ್ಬರು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಅಲಪ್ಪು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಂತ್ರಸ್ತರು ವಂದನಂ ವೈದ್ಯಕೀಯ ಕಾಲೇಜಿನಲ್ಲಿ ಮೊದಲ ವರ್ಷದಲ್ಲಿ ಎಂಬಿಬಿಎಸ್ ಓದುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾಯೂರಿನಿಂದ ಕಾಯಂಕುಲಂಗೆ ಪ್ರಯಾಣಿಸುತ್ತಿದ್ದ ರಾಜ್ಯ ಬಸ್‌ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಕಾರು ಆರಂಭದಲ್ಲಿ ವಾಹನವನ್ನು ಓವರ್‌ಟೇಕ್ ಮಾಡುತ್ತಿದ್ದು, ನಂತರ ಅದು ಬ್ರೇಕ್ ಹಾಕಿತು, ಸ್ಕಿಡ್ ಆಗಿ ರಾಜ್ಯ ಬಸ್‌ಗೆ ಡಿಕ್ಕಿಯಾಯಿತು ಎಂದು ಸ್ಥಳೀಯರು ಹೇಳಿದ್ದಾರೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next