ಕಲಬುರಗಿ: ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿ ಏಳು ಜನರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಸಾವಳಗಿ ಬಳಿ ರವಿವಾರ ಬೆಳಿಗ್ಗೆ ನಡೆದಿದೆ.
ಓರ್ವ ಗರ್ಭಿಣಿ ಸೇರಿ ನಾಲ್ವರು ಮಹಿಳೆಯರು ಹಾಗೂ ಮೂವರು ಪುರಷರು ಮೃತಪಟ್ಟಿದ್ದಾರೆ. ಇವರೆಲ್ಲರೂ ಆಳಂದ ತಾಲೂಕಿನ ನಿವಾಸಿಗಳು ಆಗಿದ್ದಾರೆ. ಗರ್ಭಿಣಿಯನ್ನು ಹೆರಿಗೆಗಾಗಿ ಕಲಬುರಗಿಗೆ ಕರೆದುಕೊಂಡು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಮುಂದುವರಿದ ಮಳೆ! ಸಾವಿರಾರು ಎಕರೆ ಬೆಳೆ ಜಲಾವೃತ
ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ ಬೇಗಂ (50), ಅಬೇದಾಬಿ ಬೇಗಂ (50), ಜಯಚುನಬಿ (60) ಹಾಗೂ ಮುನೀರ್ (28), ಮಹಮ್ಮದ್ ಅಲಿ (38), ಶೌಕತ್ ಅಲಿ (29) ಎಂಬುವವರೇ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಕಲಬುರಗಿ ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.