Advertisement
ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.
Related Articles
Advertisement
ಕಾರು ಮಾಲೀಕ ಟ್ರಯಲ್ ನೋಡಲು ಇನ್ನೋರ್ವ ಗೆಳೆಯನಿಗೆ ಕಾರು ನೀಡಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ.
ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಸವಾರ ಎದುರುಗಡೆಯಿದ್ದ ರಿಕ್ಷಾ, ಬ್ಯಾರಿಕೇಡ್ ಗೆ ಢಿಕ್ಕಿ ಹೊಡೆದು ನಂತರ ಬಾಲಕನಿಗೆ ಢಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗೊಂಡು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಾಲಾ-ಕಾಲೇಜು ಮುಂಭಾಗದಲ್ಲಿ ವಾಹನಗಳ ಅತಿವೇಗದ ಚಾಲನೆಯ ಕಡಿವಾಣಕ್ಕೆ ರಸ್ತೆಯಲ್ಲಿ ಉಬ್ಬುಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದರೂ, ಈವರೆಗೆ ಅಳವಡಿಸದೆ ಸಂಬಂಧಪಟ್ಟ ಅಧಿಕಾರಿಗಳು ತೋರಿಸಿರುವ ಬೇಜವಾಬ್ದಾರಿಯೇ ಬಾಲಕನ ಸಾವಿಗೆ ಕಾರಣ ಅನ್ನುವ ಆರೋಪವನ್ನು ಸ್ಥಳದಲ್ಲಿ ಸೇರಿದವರು ಮಾಡಿದ್ದಾರೆ.
ಮಂಗಳೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.