Advertisement

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

10:03 AM Oct 06, 2019 | keerthan |

ಅಂಕೋಲಾ: ಲಾರಿ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಂಕೋಲದ ರಾಷ್ಟ್ರೀಯ ಹೆದ್ದಾರಿ 63ರ ಹೆಬ್ಬುಳ ಬಳಿ ನಡೆದಿದೆ.

Advertisement

ಬೆಂಗಳೂರಿನಿಂದ ಕಾರವಾರ ಕಡೆ ಬರುತ್ತಿದ್ದ ಹುಂಡೈ ಕಾರು ಮತ್ತು ಅಂಕೋಲಾದಿಂದ ಯಲ್ಲಾಪುರ ಮಾರ್ಗವಾಗಿ ಹೊಗುತ್ತದ್ದ ಲಾರಿ ನಡುವೆ ಭೀಕರ ಅಪಘಾತ ನಡೆದಿದೆ.  ಕಾರವಾರದ ಮೂಲದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಇನ್ನಿಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ.

ಬೆಂಗಳೂರಿನಿಂದ ಕಾರವಾರಕ್ಕೆ ಕಾರಿನಲ್ಲಿ ಬರುತ್ತಿದ್ದ ತಂದೆ ಮಗ ಮತ್ತು ಸೊಸೆ ಬರುತ್ತಿದ್ದು, ಅಪಘಾತದಲ್ಲಿ ತಂದೆ ಕಾರವಾರದ ವಿ.ಕೆ.ಚಂದ್ರಮೌಳಿ, ಮತ್ತು ಕಾರಿನ ಚಾಲಕ ಕೊಡಿಭಾಗದ ನಿವಾಸಿ ರಾಘವೇಂದ್ರ ಡಿ. ನಾಯ್ಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮಗ ಕಾರ್ತಿಕ .ವಿ.ಸಿ ಮತ್ತು ಸೊಸೆ ಕಿರ್ತಿ .ವಿ.ಸಿ ಗಂಭೀರ ಸ್ವರೂಪದ ಗಾಯಗಳಾಗಿದ್ದು ಇವರನ್ನು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಾರು ಚಾಲಕನ ಅಜಾಗರೂಕತೆ ಚಾಲನೆ ಈ ಅವಘಡಕ್ಕೆ ಕಾರಣ ಎಂದು ಪ್ರಕರಣ ದಾಖಲಾಗಿದೆ. ಸಿಪಿಐ ಕೃಷ್ಣಾನಂದ ನಾಯಕ, ಪಿಎಸ್ಐ ಎ. ವೈ ಕಾಂಬಳೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next