Advertisement

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

08:46 PM Mar 29, 2024 | Team Udayavani |

ಬೆಳ್ತಂಗಡಿ: ಗರ್ಡಾಡಿ ಕೊಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾ. 29ರಂದು ಸಂಭವಿಸಿದೆ.

Advertisement

ವೇಣೂರು ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಚರಂಡಿಗೆ ಬಿದ್ದಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬ ಧರೆಗೆ ಉರುಳಿದೆ.

ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಲೈನ್‌ ಚಾರ್ಜ್‌ ಇತ್ತು. ತತ್‌ಕ್ಷಣವೇ ಸ್ಥಳೀಯರು ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಮಡಂತ್ಯಾರು ಮೂಲದ ಕಾರು ಇದಾಗಿದ್ದು ದೇವಸ್ಥಾನದಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next