Advertisement

ತೀರ್ಥಹಳ್ಳಿ: ನಿದ್ದೆ ಮಂಪರಿನಲ್ಲಿದ್ದ ಚಾಲಕ; ತಳುವೆ ಬಳಿ ಕಾರು ಪಲ್ಟಿ

04:31 PM May 22, 2023 | Suhan S |

ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169ರ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

Advertisement

ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ  ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು  ಆತನನ್ನು ಪಟ್ಟಣದ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವಿದ್ಯುತ್ ಕಂಬಕ್ಕೆ ಕಾರು ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಯಾವುದೇ ರೀತಿ ಗಂಭೀರ ಗಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ನಿದ್ದೆ ಮಂಪರಿನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next