ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169ರ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
Advertisement
ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು ಆತನನ್ನು ಪಟ್ಟಣದ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವಿದ್ಯುತ್ ಕಂಬಕ್ಕೆ ಕಾರು ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಯಾವುದೇ ರೀತಿ ಗಂಭೀರ ಗಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ನಿದ್ದೆ ಮಂಪರಿನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.