Advertisement

ಉಡುಪಿ ಸಂತೆಕಟ್ಟೆ ಬಳಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ

05:16 PM Jul 12, 2022 | Team Udayavani |

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ  ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ  ಘಟನೆ ಮಂಗಳವಾರ ( ಜು.12 ರಂದು) ನಡೆದಿದೆ.

Advertisement

ಸಚಿವರ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸಚಿವರ ಬೆಂಗಾವಲು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಸಿಬ್ಬಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿದೆ.

ಬೆಂಗಾವಲು ವಾಹನದ ಎದುರು ಸಂಚರಿಸುತ್ತಿದ್ದ ಲಾರಿ ಸೂಚನೆ ನೀಡದೇ ಪಥ ಬದಲಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಅದೃಷ್ಟವಶಾತ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ಎಂಬುವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next