Advertisement

ಕೊಪ್ಪಲಂಗಡಿ: ಸ್ಕೂಟಿಗೆ ಕಾರು ಢಿಕ್ಕಿ, ಸವಾರ ಗಂಭೀರ

02:55 PM Nov 14, 2022 | Team Udayavani |

ಕಾಪು : ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕೊಪ್ಪಲಂಗಡಿ ಕಮ್ಯುನಿಟಿ ಹಾಲ್ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.

Advertisement

ಕಾಪು ಕೋತಲಕಟ್ಟೆ ನಿವಾಸಿ ಫಾರೂಖ್ (65) ಗಂಭೀರ ಗಾಯಗೊಂಡಿದ್ದು ಉಡುಪಿ‌ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66 ರ ಕೊಪ್ಪಲಂಗಡಿ ಮಸೀದಿಗೆ ತೆರಳಿ, ವಾಪಸ್ಸಾಗುತ್ತಿದ್ದಾಗ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ‌ ಸಂಭವಿಸಿದೆ.

ಗಾಯಾಳುವನ್ನು ಖಾಸಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದ್ದು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.

Advertisement

ಇದನ್ನೂ ಓದಿ : ಎಲ್ಲ ಮಾದರಿಯ ಹಾಲಿನ ದರದಲ್ಲಿ ಮೂರು ರೂಪಾಯಿ ಹೆಚ್ಚಳ: ರೈತರ ಸಹಾಯಕ್ಕೆ ನಿಂತ ಕೆಎಂಎಫ್

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next