Advertisement

ಕಾರು-ಟೆಂಪೋ ಟ್ರಾವೆಲರ್‌ ಡಿಕ್ಕಿ: 3 ಗಂಭೀರ, ಕಾರು ಚಾಲಕನ ಚಿಂತಾಜನಕ

07:42 AM Jul 14, 2017 | Team Udayavani |

ಬೆಂಗಳೂರು: ಟೆಂಪೊ ಟ್ರಾವೆಲರ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 3 ಜನರಿಗೆ ಗಂಭೀರ ಗಾಯಗಳಾಗಿದ್ದು, ಕಾರು ಚಾಲಕನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಗರದ ಹೆಚ್‌ಎಸ್‌ಆರ್‌ ಪೊಲೀಸ್‌ ಠಾಣಾ ಪ್ಯಾಪ್ತಿಯಲ್ಲಿ ಶುಕ್ರವಾರ ನಸುಕಿನ ಜಾವ ನಡೆದಿದೆ.

Advertisement

ಟಿಟಿ ವಾಹನದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪರಪ್ಪನ ಅಗ್ರಹಾರ ಮತ್ತು ಕಸವನಹಳ್ಳಿ ರಸ್ತೆಯಲ್ಲಿ ಅಪಘಾತ ನಡೆದಿದೆ.  

ಎಲೆಕ್ರಾನಿಕ್ ಸಿಟಿ ಕಡೆಗೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ಸರ್ಜಾಪುರ ಕಡೆ ತೆರಳುತಿದ್ದ ಇಟಿಯಸ್ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಮತ್ತು ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ಹೆಚ್‌ಎಸ್ಆರ್ ಸಂಚಾರಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. 

ಈ ಘಟನೆ ಸಂಬಂಧ ಹೆಚ್ಎಸ್ಆರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next