Advertisement

ಕಾಪು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಮೂರು ಕಾರುಗಳು ಜಖಂ

12:13 PM May 19, 2022 | Team Udayavani |

ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನಲ್ಲಿ ಕಾರೊಂದು ಪಲ್ಟಿ ಹೊಡೆದು ನಜ್ಜುಗುಜ್ಜಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

Advertisement

ಉಡುಪಿಯಿಂದ ಉಚ್ಚಿಲದತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದ್ದು ಬಳಿಕ ಅದು ಕೆ 1 ಹೊಟೇಲ್ ಬಳಿ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ:ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್

ಅಪಘಾತದಿಂದಾಗಿ ಮೂರು ಕಾರುಗಳಿಗೆ ಹಾನಿಯುಂಟಾಗಿದ್ದು, ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next