Advertisement

Gadag; ಕಾರು – ಸಾರಿಗೆ ಬಸ್ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರ ಸಾವು!

09:49 AM Aug 18, 2024 | Team Udayavani |

ಗದಗ: ಕಾರು ಮತ್ತು ಸರ್ಕಾರಿ ಬಸ್‌ ನಡುವೆ ಭೀಕರ ಡಿಕ್ಕಿ ನಡೆದು ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

Advertisement

ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ (12) ಮೃತಪಟ್ಟಿದ್ದಾರೆ.

ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್ ಮತ್ತು ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ನಡೆದಿದೆ.

ಈ ಕುಟುಂಬ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು.

Advertisement

ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next