Advertisement
ಇವೆಲ್ಲಾ ಬರೀ ಗರ್ಭಿಣಿಯಾದ ಒಂದು ಹೆಣ್ಣುಮಗಳ ಮನಸ್ಥಿತಿಯಲ್ಲ. ತಾಯಂದಿರಾಗುವ ಎಲ್ಲರ ಮನಸ್ಥಿತಿ. ಗರ್ಭಿಣಿಯಾದಾಕೆ ಒಂದೆಡೆ ಹೀಗೆಲ್ಲಾ ಕನಸು ಕಾಣುತ್ತಿರುವ ಸಂದರ್ಭದಲ್ಲಿ ಆಕೆಯ ಯಜಮಾನರು ಮತ್ತು ತಾಯ್ತಂದೆಯರು, ಗರ್ಭಿಣಿಯ ಮಾನಸಿಕ ಆರೋಗ್ಯದ ಕುರಿತೂ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕು. ಒಳ್ಳೆಯ ಆಹಾರ ಪದ್ಧತಿಯೊಂದಿಗೆ, ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಬೇಕಾದ ಉತ್ತಮ ಜೀವನಶೈಲಿಯನ್ನು ಗರ್ಭಿಣಿಗೆ ಅಭ್ಯಾಸ ಮಾಡಿಸಬೇಕು.
-ವಾಕಿಂಗ್, ಸರಳ ವ್ಯಾಯಾಮ, ಧ್ಯಾನ
-ತಾಜಾ ಆಹಾರ (ಹಣ್ಣು, ತರಕಾರಿ, ಡ್ರೈಪ್ರೂಟ್ಸ್, ಸಿರಿಧಾನ್ಯಗಳು) ಮಾನಸಿಕ ಅರೋಗ್ಯ ಕಾಪಾಡಿಕೊಳ್ಳಲು
ಒಳ್ಳೆಯ ಅಭಿರುಚಿಗಳನ್ನು ರೂಢಿಸಿಕೊಳ್ಳುವುದು. ಉದಾಹರಣೆಗೆ: ಸಂಗೀತ, ಪೇಂಟಿಂಗ್, ಒಳ್ಳೆ ಪುಸ್ತಕಗಳನ್ನು ಓದುವುದು, ಕುಟುಂಬದವರ ಜೊತೆ ಹೆಚ್ಚು ಸಮಯ ಕಳೆಯುವುದು.
Related Articles
ಗರ್ಭಿಣಿಯ ಮಾನಸಿಕ ಆರೋಗ್ಯಕ್ಕೂ, ಮಗುವಿನ ದೈಹಿಕ ಬೆಳವಣಿಗೆಗೂ ನೇರ ನಂಟಿದೆ. ತಾಯಂದಿರ ನಕಾರಾತ್ಮಕ ಭಾವನೆಗಳು, ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕುಂದುಂಟು ಮಾಡುತ್ತದೆ. ಹಾಗಾಗಿ, ಜಗಳ, ಹಿಂಸಾತ್ಮಕ ದೃಶ್ಯಗಳು, ತೀವ್ರ ನೋವುಂಟು ಮಾಡುವ ಸಂಭಾಷಣೆಗಳು, ಅನವಶ್ಯಕ ಗದ್ದಲದಿಂದ ಗರ್ಭಿಣಿ ದೂರವಿರುವಂತೆ ನೋಡಿಕೊಳ್ಳಬೇಕು. ಆಕೆ ಸದಾ ಹಿತನುಡಿಗಳನ್ನು ಕೇಳುತ್ತ, ನಗು ನಗುತ್ತ ಇರುವಂಥ ವಾತಾವರಣ ರೂಪಿಸಬೇಕು. ಪ್ರತಿಕ್ಷಣವೂ ಆಕೆಯ ಕುರಿತು ಕಾಳಜಿ ತೋರುವುದು, ಧೈರ್ಯ ಹೇಳುವುದು, ಪೋಷಕರ ಕರ್ತವ್ಯವಾಗಬೇಕು. ಮಮತೆ, ಕಾಳಜಿಯನ್ನು ವ್ಯಕ್ತಪಡಿಸುವುದು ಅತ್ಯವಶ್ಯಕ.
Advertisement
ಮಾನಸಿಕ ಸಮಸ್ಯೆಯ ಚಿಹ್ನೆಗಳುಗರ್ಭಿಣಿಯರಲ್ಲಿ ಈ ಕೆಳಕಂಡ ಬದಲಾವಣೆಗಳು ಕಾಣಿಸಿದರೆ, ಕೂಡಲೇ ಸೂಕ್ತ ಚಿಕಿತ್ಸೆ ಕೊಡಿಸುವುದು ಒಳಿತು.
ತೀವ್ರ ದುಃಖ
ಸಾಂದ್ರತೆಯ ಸಮಸ್ಯೆ
ಅತೀ ಹೆಚ್ಚು ಅಥವಾ ಅತೀ ಕಡಿಮೆ ನಿದ್ರೆ
ನಿರಾಸಕ್ತಿ
ಆತ್ಮಹತ್ಯೆಯ ಬಗ್ಗೆ ಮರುಕಳಿಸುವ ಆಲೋಚನೆಗಳು
ವಿನಾಕಾರಣ ಆತಂಕ
ಆಹಾರ ಸೇವನೆಯಲ್ಲಿ ತೀವ್ರ ಏರುಪೇರು. ಗರ್ಭಿಣಿಯರು, ಸದಾ ಸಕಾರಾತ್ಮಕ ಚಿಂತನೆಗಳು, ಉತ್ತಮ ಅಭಿರುಚಿಗಳು, ಹವ್ಯಾಸ ಮುಂತಾದವುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ, ಮಾನಸಿಕವಾಗಿ ಮತ್ತು ದೈಹಿಕವಾಗಿ ಉತ್ತಮ ಆರೋಗ್ಯ ಹೊಂದಿದ ಮಗುವನ್ನು ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಗರ್ಭಾವಸ್ಥೆಯ ಸಮಯದಲ್ಲಿ ಮಾನಸಿಕ ಅಸ್ವಸ್ಥತೆಗೆ ಸೂಕ್ತ ಚಿಕಿತ್ಸೆ ಸಿಗದಿದ್ದಲ್ಲಿ, ತಾಯಿ ಹಾಗು ಮಗುವಿನ ಮಾನಸಿಕ ವಿಕಾಸಕ್ಕೆ ದುಷ್ಪರಿಣಾಮ ಉಂಟಾಗುವುದು ಖಂಡಿತ. – ಡಾ. ಸುಹಾಸಿನಿ ರಾಮ್