Advertisement

ವೃತ್ತಿಜೀವನ ಮಾಹಿತಿ ಕಾರ್ಯಕ್ರಮ

03:17 PM Feb 22, 2019 | Team Udayavani |

ಡೊಂಬಿವಲಿ: ಕರ್ನಾಟಕ ಸಂಘ ಡೊಂಬಿವಲಿ ಸಂಚಾಲಕತ್ವದ ಮಂಜುನಾಥ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ  ಅಂತರ್‌ ಮಹಾವಿದ್ಯಾಲಯ ಕರಿಯರ್‌ ಮಂತ್ರ ಕಾರ್ಯಕ್ರಮವು ಫೆ. 12ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

Advertisement

ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹಾಗೂ ಉದ್ಯೋಗಾವಕಾಶವನ್ನು ದೊರಕಿಸಿಕೊಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸುಮಾರು ಮೂವತ್ತಕ್ಕಿಂತಲೂ ಅಧಿಕ ಉದ್ಯೋಗ ಸಂಸ್ಥೆಗಳು ಶಿಬಿರದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸೂಕ್ತವಾದ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದವು.

ಕರ್ನಾಟಕ ಸಂಘ ಡೊಂಬಿವಲಿ ಇದರ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ಹಾಗೂ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಶಿಬಿರವನ್ನು ಉದ್ಘಾಟಿಸಿ ಅತಿಥಿ-ಗಣ್ಯರನ್ನು ಶಾಲು ಹೊದೆಸಿ, ಸ್ಮರಣಿಕೆಯನ್ನಿತ್ತು ಗೌರವಿಸಿ ಅಭಿನಂದಿಸಿದರು. ಅನಂತರ ಮಾತನಾಡಿದ ದಿವಾಕರ ಶೆಟ್ಟಿ ಇಂದ್ರಾಳಿ ಅವರು, ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉತ್ತಮ ಮಾಹಿತಿಯನ್ನು ನೀಡಿ ಅವರ ಭವಿಷ್ಯವನ್ನು ರೂಪಿಸುವಲ್ಲಿ ಸಹಕಾರಿಯಾಗಲಿದೆ ಎಂದರು.

ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಹಕಾರಿಯಾಗುವ ಇಂತಹ ಉತ್ತಮ ಕಾರ್ಯಕ್ರಮವನ್ನು ಪ್ರತೀ ವರ್ಷ ಆಚರಿಸುವಂತೆ ಸಲಹೆ ನೀಡಿದರು. ಸಂಘದ ಸದಸ್ಯ ಅಜಿತ್‌ ಉಮಾರಾಣಿ ಅವರು ಮಹಾವಿದ್ಯಾಲಯದಲ್ಲಿ ನೆರೆದ ಸುಮಾರು 2 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿ ಸಮೂಹವನ್ನು ಕಂಡು ಸಂತೋಷ ವ್ಯಕ್ತಪಡಿಸಿ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ವಿನಂತಿಸಿ ಶುಭ ಹಾರೈಸಿದರು.

ಕಾಲೇಜಿನ ಪ್ರಾಚಾರ್ಯ ಡಾ| ವಿ. ಎಸ್‌. ಅಡಿಗಲ್‌ ಅವರು ಮಾತನಾಡಿ, ಮಂಜುನಾಥ ವಿದ್ಯಾಲಯದ ಇತಿಹಾಸದಲ್ಲೇ ಪ್ರಥಮ ಅನುಭವವಾಗಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಇದೊಂದು ದಾರಿದೀಪದ ಮೈಲುಗಲ್ಲಾಗಿದ್ದು, ಇಂದಿನ ದಿನವನ್ನು ಸುವರ್ಣ ಅಕ್ಷರಗಳಲ್ಲಿ ಬರೆಯ ಬಹುದು ಎಂದರು.

Advertisement

ಸ್ಥಳೀಯ ನಗರ ಸೇವಕ ಸಾಯಿ ಶೇಲಾರ್‌ ಅವರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಧ್ಯಾಪಕಿ ಸುಶೀಲಾ ವಿಜಯಕುಮಾರ್‌ ಕಾರ್ಯಕ್ರಮ ನಿರ್ವಹಿಸಿದರು. ಸಮಿತಿಯ ಮುಖ್ಯಸ್ಥರಾದ ಡಿ. ಜಿ. ನಾಜಿರ್ಕಾರ್‌ ಮತ್ತು ವೃಂದ ಯಾಡ್ವಾಡ್‌ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಮಹಾವಿದ್ಯಾಲಯದ  ಶಿಕ್ಷಕರಾದ ಜಯಂತಿ ವೈಕುಂಠ, ಶಶಿಕಾಂತ್‌ ಉಡ್ಡೋಡ್ಗಿ, ನಿಶಾ ದೇವªರ್‌, ಇನ್ನಿತರ ಉಪನ್ಯಾಸಕರು, ಶಿಕ್ಷಕೇತರ ಸಿಬಂದಿಗಳು ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next