Advertisement
ವಿದ್ಯಾರ್ಥಿಗಳು ಸದಾ ಆಶಾವಾದಿಯಾಗಿರಬೇಕು. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು. ನಿರಾಶಾವಾದಿಗಳು ಅವಕಾಶಗಳಲ್ಲಿ ಸಮಸ್ಯೆಗಳನ್ನು ಕಂಡರೆ, ಆಶಾವಾದಿಗಳು ಸಮಸ್ಯೆಗಳಲ್ಲೂ ಅವಕಾಶಗಳನ್ನು ಕಂಡುಕೊಳ್ಳುತ್ತಾರೆ. ಸಮಸ್ಯೆಗಳನ್ನು ನಗುಮೊಗದಿಂದಲೇ ಬಗೆಹರಿಸುವುದನ್ನು ರೂಢಿಸಿಕೊಳ್ಳಬೇಕು.
Related Articles
Advertisement
ಬಿ.ವಿ.ಭೂಮರೆಡ್ಡಿ ಎಂಜಿನಿಯರಿಂಗ್ ಕಾಲೇಜು ಯಾವುದೇ ಐಐಟಿಗೂ ಕಡಿಮೆಯಿಲ್ಲ ಎಂಬುದನ್ನು ರತನ್ ಟಾಟಾ ಹಾಗೂ ನಾರಾಯಣ ಮೂರ್ತಿ ಹೇಳಿದ್ದಾರೆ. ಇದಕ್ಕೆ ಉತ್ತಮ ಬೋಧಕರು ಹಾಗೂ ಉತ್ತಮ ವಿದ್ಯಾರ್ಥಿಗಳೇ ಕಾರಣ. ಮುಂದಿನ 5 ವರ್ಷಗಳಲ್ಲಿ ಕೆಎಲ್‌ಇ ತಾಂತ್ರಿಕ ವಿವಿ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆಯುವುದರಲ್ಲಿ ಸಂದೇಹವಿಲ್ಲ ಎಂದರು.
ಕೆಎಲ್‌ಇ ಸಂಸ್ಥೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಎಲ್‌ಇ ವಿದ್ಯಾರ್ಥಿಗಳಿಗೆ ಮೂರು ಸವಾಲು ಹಾಕಿದ್ದಾರೆ. ಒಲಿಂಪಿಕ್ಸ್ ಪದಕ ಗೆಲ್ಲುವುದು, ಸಂಶೋಧನೆಯಲ್ಲಿ ಅಪ್ರತಿಮ ಸಾಧನೆ ಹಾಗೂ ಅಂತಾರಾಷ್ಟ್ರೀಯ ಉನ್ನತ 100 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಕೆಎಲ್‌ಇ ವಿಶ್ವವಿದ್ಯಾಲಯ ಸ್ಥಾನ ಪಡೆಯುವಂತಾಗಬೇಕು. ಈ ದಿಸೆಯಲ್ಲಿ ಬೋಧಕರು ಹಾಗೂ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು.
ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪದಕ ಪ್ರದಾನ ಮಾಡಲಾಯಿತು. ಉತ್ಕೃಷ್ಟ ಸಾಧನೆ ಮಾಡಿದ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಲಕ್ಷ್ಮಣ ನಿಂಬರಗಿ, ಮಲ್ಲಿಕಾರ್ಜುನ ಮಾಮನಿ, ಕೀರೇಶ ಬಾದಾಮಿ, ಅವಿನಾಶ ನಡುವಿನಮನಿ, ಸುಧೀರ ಪಾಟೀಲರನ್ನು ಸತ್ಕರಿಸಲಾಯಿತು. ಕೆಎಲ್‌ಇ ತಾಂತ್ರಿಕ ವಿವಿ ಕುಲಪತಿ ಡಾ| ಅಶೋಕ ಶೆಟ್ಟರ, ಕಾಲೇಜಿನ ಪ್ರಾಚಾರ್ಯ ಡಾ| ಪಿ.ಜಿ.ತೇವರಿ, ಅನಿಲ ನಂದಿ, ಪ್ರೊ| ದೇಸಾಯಿ ಮೊದಲಾದವರಿದ್ದರು.