Advertisement

ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ಅಗತ್ಯ

09:18 AM Jul 26, 2017 | |

ಬೀದರ: ನಿರುದ್ಯೋಗಿಗಳ ಜೀವನೋಪಾಯಕ್ಕೆ ಅನುಕೂಲವಾಗಲು ಸರ್ಕಾರ ಹತ್ತು ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಯುವಕರು ಹಾಗೂ ಯುವತಿಯರು ಅಂತಹ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದು ಜಿಪಂ ಡಿಆರ್‌ಡಿಎ ಯೋಜನಾ ನಿರ್ದೇಶಕ ರಾಮಕೃಷ್ಣ ಕರೆ ನೀಡಿದರು.

Advertisement

ನಗರದ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ನಡೆದ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು, ಉದ್ಯೋಗ ಆಕಾಂಕ್ಷಿಗಳು ತರಬೇತಿ ಹಾಗೂ ಅರ್ಹತೆ ಹೊಂದುವುದು ಅತಿ ಅವಶ್ಯವಾಗಿದೆ ಎಂದರು. ರಾಜ್ಯ ಸರ್ಕಾರ ಕರ್ನಾಟಕ ಕೌಶಲ್ಯ ಯೋಜನೆ ಜಾರಿ ಮಾಡಿ ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುವ ಪ್ರತಿಜ್ಞೆ ಮಾಡಿದೆ. ಈ ಯೋಜನೆಯಡಿ ಜಿಲ್ಲೆಯಲ್ಲಿ ಈಗಾಗಲೇ ಸಾವಿರಾರು ಅಭ್ಯರ್ಥಿಗಳು ತಮ್ಮ ಹೆಸರು ನೋಂದಾಯಿಸಿದ್ದಾರೆ. ಹೆಸರು ನೋಂದಾಯಿಸಿದ ಅಭ್ಯರ್ಥಿಗಳಿಗೆ ತರಬೇತಿ ಹಾಗೂ ಉದ್ಯೋಗ ಕೊಡಿಸುವ ಕಾರ್ಯ ನಿರಂತರವಾಗಿ ನಡೆದಿದೆ. ವಜೀರ್‌ ಕೌಶಲ್ಯ ಅಭಿವೃದ್ಧಿ ತರಬೇತಿ ಸಂಸ್ಥೆಯು ಸರ್ಕಾರದ ಅನುಮೋದಿತ ಸಂಸ್ಥೆಯಾಗಿದ್ದು, ಇಲ್ಲಿ ತರಬೇತಿ ಉಚಿತವಾಗಿದೆ. ಅಭ್ಯರ್ಥಿಗಳು ತಮ್ಮ ಹೆಸರು ನೋಂದಾಯಿಸಿ ತರಬೇತಿ ಹೊಂದಬೇಕು ಎಂದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಧನರಾಜ ಬೋರಾಳೆ ಮಾತನಾಡಿ, ಉದ್ಯೋಗ ಮೇಳವು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬೆಳಗ್ಗೆ 10:30ರಿಂದ ಸಂಜೆ 4ರ ವರೆಗೆ ನಡೆಯಲಿದೆ. ಜು.27ರಂದು ಔರಾದ ತಾಪಂ ಸಭಾಂಗಣದಲ್ಲಿ, ಜು.28ರಂದು ಹುಮನಾಬಾದ ತಾಪಂ ಸಭಾಂಗಣದಲ್ಲಿ, ಜು.29ರಂದು ಬಸವಕಲ್ಯಾಣದ ತಾಪಂ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ವಜೀರ್‌ ಕೌಶಲ್ಯ ಅಭಿವೃದ್ಧಿ ತರಬೇತಿ ಸಂಸ್ಥೆಯ ವ್ಯವಸ್ಥಾಪಕರು ಉಪಸ್ಥಿತರಿದ್ದರು. ವಾರ್ತಾ ಇಲಾಖೆ ಅಧಿ ಕಾರಿ ಗವಿಸಿದ್ದಪ್ಪ ಹೊಸಮನಿ ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next