Advertisement
ಇಲ್ಲಿ ರಸ್ತೆ ಮಧ್ಯೆ ಇರುವ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಕಂಬ ಅಲ್ಲಿಯೇ ಇರಲು ಬಿಟ್ಟು ರಸ್ತೆಯ ಡಾಂಬರೀಕರಣ ಮಾಡಿದ್ದು ಇದು ಅಧಿಕಾರಿಗಳ ದಿವ್ಯ ನಿರ್ಲಕ್ಷ ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
Related Articles
Advertisement
ಇಲ್ಲಿಯ ನಿವಾಸಿಗಳು ವಿದ್ಯುತ್ ಕಂಬ ಸ್ಥಳಾಂತರಗೊಳಿಸುವಂತೆ ನಗರಸಭೆ ಹಾಗೂ ಹೆಸ್ಕಾಂ ಕಚೇರಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಸಂಬಂಧಪಟ್ಟ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿಲ್ಲ. ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ವಿದ್ಯುತ್ ಕಂಬ ಅಡ್ಡ ಬಂದಿದ್ದರಿಂದ ರಸ್ತೆ ಅಭಿವೃದ್ಧಿ ಕಾರ್ಯಕ್ಕೂ ಅಡ್ಡಿಯಾಗಿತ್ತು. ಆದರೆ, ಈಗ ರಸ್ತೆ ಮಧ್ಯೆ ವಿದ್ಯುತ್ ಕಂಬ ಇದ್ದರೂ ಕೂಡ ಅದನ್ನು ಅಲ್ಲಿಯೇ ಹಾಗೆಯೇ ಬಿಟ್ಟು ರಸ್ತೆಯನ್ನು ಡಾಂಬರೀರಣಗೊಳಿಸಿ ಅಭಿವೃದ್ಧಿ ಪಡಿಸಲಾಗಿದೆ.
ರಸ್ತೆ ಮಧ್ಯದ ಕಂಬವನ್ನು ಸ್ಥಳಾಂತರಿಸುವಂತೆ ನಗರಸಭೆ ಅಧ್ಯಕ್ಷೆ, ಸದಸ್ಯರಿಗೆ, ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ನಗರಸಭೆಯವರು ವಿದ್ಯುತ್ ಕಂಬ ಸ್ಥಳಾಂತರಿಸುವುದು ಹೆಸ್ಕಾಂನವರ ಕೆಲಸ ಎಂದು ಸಬೂಬು ನೀಡುತ್ತಾರೆ. ಆದರೆ, ಹೆಸ್ಕಾಂ ಇಲಾಖೆ ಅಧಿಕಾರಿಗಳು ಇದು ನಗರಸಭೆಗೆ ಸಂಬಂಧಪಟ್ಟದು ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದ್ದು, ಯಾರೂ ವಿದ್ಯುತ್ ಕಂಬ ಸ್ಥಳಾಂತಕ್ಕೆ ಮುಂದಾಗುತ್ತಿಲ್ಲ. ಪರಿಣಾಮ ಇಲ್ಲಿನ ನಿವಾಸಿಗಳು ನಿತ್ಯ ಹೆಸ್ಕಾಂ ಹಾಗೂ ನಗರಸಭೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.