Advertisement
ವಿಧಾನಸೌಧದ ಬ್ಯಾಂಕ್ವೇಟ್ ಹಾಲ್‌ನಲ್ಲಿ ಸೋಮವಾರ ಸಮಾಜಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ “ಕಲ್ಯಾಣ ಮಿತ್ರ’ ಸಹಾಯವಾಣಿ ಲೋಕಾರ್ಪಣೆ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
“ದಾಖಲೆಗಳು ಸರಳೀಕರಣವಾಗಬೇಕು. ಇಲಾಖೆಗಳ ಸಮನ್ವಯ. ನೌಕರರಲ್ಲಿ ತಾಳಮೇಳ ಇವೆಲ್ಲವುಗಳ ಅಮೂಲಾಗ್ರ ಬದಲಾವಣೆಯ ಅವಶ್ಯಕತೆ ಇದೆ. ಅತ್ಯಂತ ಸರಳವಾಗಿ ಕಾರ್ಯಕ್ರಮಗಳನ್ನು ರೂಪಿಸಿ, ಅವುಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು ಎಂದ ಅವರು, ಈ ದಿಸೆಯಲ್ಲಿ ಈಗಾಗಲೇ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ತಾಲ್ಲೂಕು ಮಟ್ಟದಿಂದ ಪ್ರಧಾನ ಕಾರ್ಯದರ್ಶಿಗಳವರೆಗೆ ಯಾವೊಂದು ಕಡತದ ನಿರ್ಣಯಕ್ಕೆ ಆಡಳಿತಾತ್ಮಕವಾಗಿ 15-16 ಹಂತಗಳಿವೆ. ಈ ಹಂತಗಳಿಗೆ ಕತ್ತರಿ ಹಾಕಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಕಡತದಲ್ಲಿ ಬರೀ ರುಜು ಹಾಕುವ ಐಎಎಸ್ ಅಧಿಕಾರಿಗಳು ನನಗೆ ಬೇಡ. ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಉಲ್ಲೇಖಿಸುವ ಅಧಿಕಾರಿಗಳು ಬೇಕು’ ಎಂದರು.
Related Articles
Advertisement
ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್. ನಾಗೇಶ್, ವಿಧಾನ ಪರಿಷತ್ ಸದಸ್ಯರಾದ ಅ. ದೇವೇಗೌಡ, ವೈ.ಎ. ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.