ಹೇಗ್: ಉತ್ತರ ಸಮುದ್ರದಲ್ಲಿ ಸುಮಾರು 3,000 ಕಾರುಗಳನ್ನು ಹೊತ್ತೊಯ್ಯುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂದು ಓರ್ವ ಭಾರತೀಯ ಸಿಬ್ಬಂದಿ ಸಾವನ್ನಪ್ಪಿ ಹಲವು ಮಂದಿ ಭಾರತೀಯ ಸಿಬಂದಿಗಳು ಗಾಯಗೊಂಡಿದ್ದಾರೆ ಎಂದು ಡಚ್ ಕೋಸ್ಟ್ ಗಾರ್ಡ್ ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.
ವರದಿಯ ಪ್ರಕಾರ, ಬೆಂಕಿಯನ್ನು ನಂದಿಸಲು ವಿಫಲವಾದ ನಂತರ 23 ಸಿಬ್ಬಂದಿಯನ್ನು ಹಡಗಿನಿಂದ ಇಳಿಸಲು ದೋಣಿಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಸೇವೆಗೆ ಒತ್ತಲಾಯಿತು. ಬೆಂಕಿಯ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಮತ್ತು ಒಬ್ಬ ಸದಸ್ಯ ಹೇಗೆ ಸಾವನ್ನಪ್ಪಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ.
ಜರ್ಮನಿಯ ಬಂದರು ಬ್ರೆಮರ್‌ಹೇವನ್‌ನಿಂದ ಸಿಂಗಾಪುರಕ್ಕೆ ಪ್ರಯಾಣಿಸುತ್ತಿದ್ದಾಗ ಡಚ್ ದ್ವೀಪದ ಅಮೆಲ್ಯಾಂಡ್‌ನ ಉತ್ತರಕ್ಕೆ 27 ಕಿಲೋಮೀಟರ್ ದೂರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಹೊತ್ತಿಕೊಳ್ಳುತಿದ್ದಂತೆ ಕೆಲವು ಸಿಬ್ಬಂದಿಗಳು ತಮ್ಮನ್ನು ರಕ್ಷಿಸಿಕೊಳ್ಳಲು ಹಡಗಿನಿಂದ ಜಿಗಿದು ಲೈಫ್‌ಬೋಟ್ ಮೂಲಕ ಪ್ರಾಣ ಉಳಿಸಲಾಯಿತು ಎಂದು ಲೈಫ್‌ಬೋಟ್‌ನ ಕ್ಯಾಪ್ಟನ್ ಡಚ್ ಬ್ರಾಡ್‌ಕಾಸ್ಟರ್ ಹೇಳಿದ್ದಾರೆ.
ಪ್ರಾಣ ಉಳಿಸಿಕೊಳ್ಳುವ ವೇಳೆ ಕೆಲವು ಸಿಬ್ಬಂದಿಗಳ ಕೈ ಕಾಲಿನ ಮೂಳೆ ಮುರಿತಕ್ಕೆ ಒಳಗಾಗಿದ್ದು ಅವರನ್ನು ಉತ್ತರ ನೆದರ್ಲ್ಯಾಂಡ್ ನ ಆಸ್ಪತ್ರೆಗಳಿಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ನೆದರ್ಲೆಂಡ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿದ್ದು, “ಉತ್ತರ ಸಮುದ್ರದಲ್ಲಿ ನಡೆದ ಹಡಗು ದುರಂತ ನಡೆದ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ, ಅಲ್ಲದೆ ಇದರಲ್ಲಿ ಭಾರತೀಯ ನಾವಿಕರೊಬ್ಬರು ಮೃತಪಟ್ಟಿದ್ದು ಮತ್ತು ಸಿಬ್ಬಂದಿಗೆ ಗಾಯಗಳಾಗಿವೆ. ಭಾರತದ ರಾಯಭಾರ ಕಚೇರಿಯು ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಮತ್ತು ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರಲು ಸಹಾಯ ಮಾಡಲಿದೆ ಎಂದಿದೆ.
ಉಳಿದ 20 ಗಾಯಗೊಂಡ ಸಿಬ್ಬಂದಿಗಳೊಂದಿಗೆ ರಾಯಭಾರ ಕಚೇರಿ ಸಂಪರ್ಕದಲ್ಲಿದೆ, ಅವರು ಸುರಕ್ಷಿತವಾಗಿದ್ದಾರೆ ಮತ್ತು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಚ್ ಅಧಿಕಾರಿಗಳು ಮತ್ತು ಶಿಪ್ಪಿಂಗ್ ಕಂಪನಿಯೊಂದಿಗೆ ಸಮನ್ವಯದಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನು ವಿಸ್ತರಿಸಲಾಗುತ್ತಿದೆ, ಎಂದು ”ರಾಯಭಾರ ಕಚೇರಿ ಮಾಹಿತಿ ನೀಡಿದೆ.
ಇದನ್ನೂ ಓದಿ: Amitabh Bachchan: ಮಹಿಳೆಯರ ಒಳಉಡುಪಿನ ಬಗ್ಗೆ ಟ್ವೀಟ್; ಟ್ರೋಲಾದ ಬಿಗ್ ಬಿ ಅಮಿತಾಭ್