Advertisement
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅ. 26ಕ್ಕೆ ಬೆಂಗಳೂರಿನಲ್ಲಿ ಕಂಬಳ ಆಯೋಜಿಸಲಾಗುತ್ತಿಲ್ಲ ಎಂದು ಕಂಬಳ ಸಮಿತಿ ಪರ ವಕೀಲರು ಹೇಳಿದ್ದಾರೆ. ಹಾಗಾಗಿ ಅರ್ಜಿಯ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಲಾಗುವುದು. ಸರಕಾರದ ವಾದ ಮತ್ತು ಅರ್ಜಿದಾರರ ಉಳಿದ ಆಕ್ಷೇಪಗಳನ್ನು ಮುಂದಿನ ವಿಚಾರಣೆ ವೇಳೆ ಪರಿಗಣಿಸಲಾಗುವುದು ಎಂದು ಹೇಳಿ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
Related Articles
Advertisement
ಅನುಮತಿ ಕೊಡುವ ವಿಚಾರ ನಮಗೆ ತಿಳಿಸಿ: ಅರ್ಜಿದಾರರುಅರ್ಜಿದಾರರ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ, ಕಂಬಳ ಸ್ಪರ್ಧೆ ನಡೆಸುವಾಗ ಅನುಮತಿ ನೀಡುವ ವಿಚಾರವನ್ನು ನಮಗೆ ಸರಕಾರ ತಿಳಿಸಬೇಕು. ಆಗ ನಾವು ನ್ಯಾಯಾಲಯದ ಮುಂದೆ ಬರಲು ಸಾಧ್ಯವಾಗುತ್ತದೆ. ಬೆಂಗಳೂರು ಬಳಿಕ ಶಿವಮೊಗ್ಗದಲ್ಲೂ ಕಂಬಳ ಆಯೋಜಿಸುವ ಬಗ್ಗೆ ಹೇಳಲಾಗುತ್ತಿದೆ. ನವೆಂಬರ್ 9ರಂದು ದಕ್ಷಿಣ ಕನ್ನಡದ ಪಿಲಿಕುಳ ಪ್ರಾಣಿ ಸಂಗ್ರಹಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾ ಧಿಕಾರಿಗೆ ಪತ್ರ ಬರೆದು ಸ್ಪರ್ಧೆಯ ವೇಳೆ ಉಂಟಾಗುವ ಕೂಗಾಟದಿಂದ ಬೇರೆ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದಾರೆ. ಈ ಸಂಬಂಧ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಲಾಗಿದೆ ಎಂದು ವಿವರಿಸಿದರು. ಅಕ್ಟೋಬರ್ 26ಕ್ಕೆ ಬೆಂಗಳೂರು ಕಂಬಳ ಇಲ್ಲ
ವಿಚಾರಣೆ ಆರಂಭವಾಗುತ್ತಿದ್ದಂತೆ ಬೆಂಗಳೂರು ಕಂಬಳ ಸಮಿತಿ ಪರ ವಕೀಲ ಎಂ. ವಿನೋದ್ ಕುಮಾರ್ ಹಾಜರಾಗಿ, ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ ಮತ್ತು ಬೇರೆಲ್ಲೂ ಕಂಬಳ ನಡೆಸುವ ಸಂಬಂಧ ಸರಕಾರದ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿಲ್ಲ. ಮಾಧ್ಯಮಗಳ ವರದಿ ಆಧರಿಸಿ ಅರ್ಜಿದಾರರು ಹೈಕೋರ್ಟ್‌ಗೆ ಬಂದಿದ್ದಾರೆ ಎಂದು ನ್ಯಾಯಾಲಯಕ್ಕೆ ವಿವರಿಸಿದರು.