Advertisement

ಗುಣಮಟ್ಟದ ಕಾಮಗಾರಿ ಕೈಗೊಳ್ಳಿ

02:33 PM Dec 18, 2021 | Team Udayavani |

ಮಾನ್ವಿ: ಅಂದಾಜು ಪಟ್ಟಿಗೆ ಅನುಗುಣವಾಗಿ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಂಡು ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಪಂ ಸಿಇಒ ತನ್ವೀರ್‌ ಅಸಿಫ್‌ ಸೂಚಿಸಿದರು.

Advertisement

ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2021-22ನೇ ಸಾಲಿನಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಕುರ್ಡಿ ಗ್ರಾಮದ ಸರಕಾರಿ ಬಾಲಕರ ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ನೀಡುತ್ತಿದ್ದಾರೆಯೇ ಎಂದು ವಿದ್ಯಾರ್ಥಿಗಳಿಗೆ ಕೇಳಿ ತಿಳಿದುಕೊಂಡರು. ನರೇಗಾ ಯೋಜನೆಯಡಿ ನಿರ್ಮಿಸಲಾದ ಬಿಸಿಯೂಟ ಕೊಠಡಿ, ಅಂಗನವಾಡಿ ಕೇಂದ್ರ ವೀಕ್ಷಿಸಿದರು. ಸರಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಿರುವ ಭೋಜನಾಲಯ, ಸರಕಾರಿ ಉರ್ದು ಶಾಲೆಯಲ್ಲಿನ ಭೋಜನಾಲಯ ಹಾಗೂ ಬಿಸಿಯೂಟ ಕೋಣೆ, ಗೊರ್ಕಲ್‌ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಅಂಗನವಾಡಿ ಕೇಂದ್ರ, ಭೋಜನಾಲಯ ಹಾಗೂ ಜಲ ಜೀವನ್‌ ಮೀಷನ್‌ ಅಡಿಯಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಕೆರೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು.

ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಸ್ಟೇಲಾ ವರ್ಗೀಸ್‌ ಹಾಗೂ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಅಲಂ ಬಾಷಾ, ಗ್ರಾಮೀಣ ಕುಡಿಯುವ ನೀರಿನ ಯೋಜನೆ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಎ.ಇ.ಇ. ಅಮೀನುದ್ದಿನ್‌, ಮುಖಂಡರಾದ ಈರಣ್ಣ, ಸೈಯದ್‌ ಅಹಾದ್‌ ಬಾಷಾ ಹಾಗೂ ಗ್ರಾಪಂ ಸದಸ್ಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next