Advertisement

ಕೃಷಿ ಮೂಲ ಸೌಕರ್ಯ ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಿ

02:38 PM Apr 24, 2021 | Team Udayavani |

ದೇವನಹಳ್ಳಿ: ಕೇಂದ್ರದ ಕೃಷಿ ಮೂಲ ಸೌಕರ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿ ಆಗಿ ಅನುಷ್ಠಾನ ಗೊಳಿಸಲು ವ್ಯಾಪಕ ಪ್ರಚಾರ ಕೈಗೊಳ್ಳುವಮೂಲಕ ರೈತ ಉತ್ಪಾದಕ ಸಂಘಗಳು, ಮಾರುಕಟ್ಟೆ ಸಹಕಾರ ಸಂಘಗಳಿಗೆ ಅರಿವು ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌ ಕೆ. ನಾಯಕ ತಿಳಿಸಿದರು.

Advertisement

ತಾಲೂಕಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಮೂಲ ಸೌಕರ್ಯ ನಿಧಿ ಅನುಷ್ಠಾನದಲ್ಲಿ ಉತ್ತಮ ಪ್ರಗತಿ ಸಾಧಿ ಸಲು ಅಗತ್ಯ ಕ್ರಮ ಕೈಗೊಳ್ಳುವಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಮೂಲ ಸೌಕರ್ಯದಡಿ ರೈತರು, ಸಹಕಾರ ಸಂಘಗಳಿಗೆ ಅಗತ್ಯ ಸಬ್ಸಿಡಿ ಸೌಲಭ್ಯದೊಂದಿಗೆ ನೀಡಲಾಗುವ ಸಹಾಯಧನದ ಬಗ್ಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನಾ ಇಲಾಖೆಗಳು, ಕರಪತ್ರಹಂಚುವ ಮೂಲಕ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಹೆಚ್ಚು ಬೆಳೆಯಲಾಗು  ತ್ತಿದ್ದು, ಅಂತಹ ರೈತರನ್ನು ಗುರುತಿಸಿ ಅವರಿಗೆ ಪ್ಯಾಕ್‌ ಹೌಸ್‌, ಶೈತ್ಯಾಗಾರಗಳು, ಗೋದಾಮುಗಳ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಬಳಿ ಅಗತ್ಯ ದಾಖಲೆಗಳಿದ್ದರೆ ಬ್ಯಾಂಕ್‌ ಗಳು ವಿಳಂಬ ಮಾಡದೆ, ಶೀಘ್ರವಾಗಿ ಸಾಲ ಮಂಜೂರು ಮಾಡುವಂತೆ ತಿಳಿಸಿದರು.

ಪಶು ಆಹಾರ ಉತ್ಪಾದಿಸಿ: ರೈತ ಸಹಕಾರ ಸಂಘಗಳು, ಸ್ವಸಹಾಯ ಗುಂಪುಗಳ ಸದಸ್ಯರು ಸ್ವತಃ ಪಶು ಆಹಾರ ತಯಾರಿಕಾ ಘಟಕಗಳನ್ನು ಸ್ಥಾಪಿಸುವ ಮೂಲಕ ಪಶು ಆಹಾರ ಉತ್ಪಾದನೆಮಾಡಬಹುದು. ಕುರಿ, ಮೇಕೆ ಸಾಕಾಣಿಕೆ ಘಟಕ ಗಳನ್ನು ನಿರ್ಮಿಸಿಕೊಳ್ಳಲು ಈ ಯೋಜನೆಯಡಿ ಅವಕಾಶವಿದ್ದು, ಸಿರಿ ಧಾನ್ಯಗಳನ್ನು ಸಂಗ್ರಹಿಸಿ, ಸಹಕಾರ ಸಂಘಗಳ ಮೂಲಕ ಉತ್ತಮ ಬೆಲೆಗೆ ಮಾರಾಟ ಮಾಡಬಹುದು ಎಂದು ತಿಳಿಸಿದರು.

ತಾಲೂಕು ಮಟ್ಟದಲ್ಲಿ ತರಬೇತಿ ನೀಡಿ: ಪ್ರಾಥಮಿಕ ಕೃಷಿ ಕ್ರೆಡಿಟ್‌ ಸಹಕಾರ ಸಂಘಗಳು, ಮಾರುಕಟ್ಟೆ ಸಹಕಾರ ಸಂಘಗಳು, ಸ್ವಸಹಾಯ ಸಂಘಗಳು ಸೇರಿಈ ಯೋಜನೆ ಲಾಭ ಪಡೆದುಕೊಳ್ಳುವ ವಿವಿಧ ಸಂಘ ಗಳ ಸದಸ್ಯರಿಗೆ ತಾಲೂಕು ಮಟ್ಟದಲ್ಲಿ ತರ ಬೇತಿ ನೀಡುವ ಮೂಲಕ ಈ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದರು. ಜಿಲ್ಲಾ ಮಟ್ಟದ ರೈತ ಉತ್ಪಾದಕರ ಸಂಸ್ಥೆಗಳ ಪ್ರಗತಿ ಪರಿಶೀಲನೆ ನಡೆಸಿದರು.

Advertisement

ಸಭೆಯಲ್ಲಿ ಜಿಲ್ಲಾ ಕೃಷಿ ಉಪ ನಿರ್ದೇಶಕಿ ಎಂ.ಸಿ.  ವಿನುತಾ, ಜಿಲ್ಲಾ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಮಧು ಸೂದನ್‌, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಅನಿಲ್‌ಕುಮಾರ್‌, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿ ಕಾರಿಗಳು ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next