Advertisement

Popular Cartoonist ಅಜಿತ್ ನಿನನ್ ಹೃದಯಾಘಾತದಿಂದ ನಿಧನ

04:34 PM Sep 08, 2023 | Team Udayavani |

ಮೈಸೂರು: ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

Advertisement

ಹೈದರಾಬಾದಿನಲ್ಲಿ ಜನಿಸಿದ ಅವರು, ಚೆನ್ನೈನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದ ನಂತರ ವ್ಯಂಗ್ಯಚಿತ್ರಕಾರರಾದರು. ಇಂಡಿಯಾ ಟುಡೆ, ಔಟ್ ಲುಕ್, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗಳಿಗೆ ವ್ಯಂಗ್ಯಚಿತ್ರಕಾರರಾಗಿ ದುಡಿದರು. ಇಂಡಿಯಾ ಟುಡೆ ಪತ್ರಿಕೆ ಬಳಗದ ‘ಟಾರ್ಗೆಟ್’ ಎಂಬ ಮಕ್ಕಳ ಪತ್ರಿಕೆಗೆ ‘ಡಿಟೆಕ್ಟಿವ್‌ ಮೂಚುವಾಲಾ’ ಎಂಬ ಸರಣಿ ವ್ಯಂಗ್ಯಚಿತ್ರಗಳನ್ನು ಪ್ರಕಟಿಸಿದ್ದರು. ಬಳಿಕ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನಿತ್ಯ ವ್ಯಂಗ್ಯಚಿತ್ರ ಬರೆಯುತ್ತಿದ್ದರು.

ದೆಹಲಿಯಲ್ಲಿದ್ದ ಅವರು, ಎರಡು ವರ್ಷಗಳ ಹಿಂದೆ ಮೈಸೂರಿನ ಕೆಆರ್ ಎಸ್ ರಸ್ತೆಯ ಅಪಾರ್ಟ್ ಮೆಂಟ್ ವೊಂದರ ಫ್ಲಾಟ್ ನಲ್ಲಿ ವಾಸಿಸುತ್ತಿದ್ದರು.ಅವರ ಅಂತ್ಯಕ್ರಿಯೆ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಭಾನುವಾರ (ಸೆ10) ಮಧ್ಯಾಹ್ನ ಒಂದು ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.ಅಜಿತ್ ನಿನನ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next