Advertisement
ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಮಂಗಳೂರು ಶಾಖೆ ವತಿಯಿಂದ ಡಾ| ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರ್‌ನಲ್ಲಿ ಶುಕ್ರವಾರ “ಸ್ವಾಧ್ಯಾಯ’ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಅವರು, ಯುವಜನತೆ ಈ ಕ್ಷೇತ್ರದ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬೇಕು. ಮಂಗಳೂರು ಶಾಖೆ ರಾಷ್ಟ್ರಮಟ್ಟದಲ್ಲೇ ಗಮನ ಸೆಳೆದಿದೆ ಎಂದು ಶ್ಲಾಘಿಸಿದರು. ಭಾರತ್ ಫೋರ್ಜ್ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಸಾಲೆತ್ತೂರು ಮಾತನಾಡಿ, ಲೆಕ್ಕಪರಿಶೋಧಕ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳಿದ್ದು, ಸ್ವಾಧ್ಯಾಯ ಸಮ್ಮೇಳನ ಪೂರಕ ಎಂದರು.
“ಬ್ಯಾಂಕ್ ಲೆಕ್ಕ ಪರಿಶೋಧನೆಗೆ ಹೊಸ ತಂತ್ರಾಂಶ’
ಮಂಗಳೂರು: ಬ್ಯಾಂಕ್‌ಗಳ ಲೆಕ್ಕ ಪರಿಶೋಧನೆಯಲ್ಲಿ ಲೋಪಗಳನ್ನು ತಡೆಗಟ್ಟಲು ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಆರ್‌ಬಿಐ ಸಮ್ಮತಿಯೊಂದಿಗೆ ಹೊಸ ತಂತ್ರಾಂಶ ಸಿದ್ಧಪಡಿಸಿದ್ದು, ಮೂರು ಬ್ಯಾಂಕ್‌ಗಳು ಅಳವಡಿಸಿವೆ ಎಂದು ಐಸಿಎಐ ಪಿಡಿಸಿ ಅಧ್ಯಕ್ಷ ರಂಜಿತ್ ಕುಮಾರ್ ಅಗರ್‌ವಾಲ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು, ಸಿಂಡಿಕೇಟ್ ಬ್ಯಾಂಕ್, ದೇನಾ ಬ್ಯಾಂಕ್ ಹಾಗೂ ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ನೂತನ ತಂತ್ರಾಂಶವನ್ನು ಲೆಕ್ಕ ಪರಿಶೋಧನೆಗೆ ಅಳವಡಿಸಿವೆ. ಈ ವರ್ಷ ಇನ್ನೂ 10 ಬ್ಯಾಂಕ್‌ಗಳು ಅಳವಡಿಸುವ ನಿರೀಕ್ಷೆ ಇದೆ. ಈ ವ್ಯವಸ್ಥೆಯಲ್ಲಿ ತಂತ್ರಾಂಶವೇ ರ್‍ಯಾಂಡಮ್ ಆಗಿ ಲೆಕ್ಕಪರಿಶೋಧಕರನ್ನು ಆಯ್ಕೆ ಮಾಡುತ್ತದೆ. ಅವರ ಮೂಲಕವೇ ಲೆಕ್ಕ ಪರಿಶೋಧನೆ ಮಾಡಿಸಬೇಕಾಗುತ್ತದೆ. ಇದು ಬ್ಯಾಂಕುಗಳ ಲೆಕ್ಕಪರಿಶೋಧನೆಯಲ್ಲಿ ಪ್ರಭಾವ ಬೀರುವುದನ್ನು ತಪ್ಪಿಸುತ್ತದೆ ಎಂದರು. ಲೆಕ್ಕ ಪರಿಶೋಧನೆ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಬ್ಲಾಕ್‌ಚೈನ್ ವ್ಯವಸ್ಥೆ ಪೂರಕವಾಗಿದೆ. ಯುಎಇಯಲ್ಲಿ ಈ ವ್ಯವಸ್ಥೆ ಯಶಸ್ವಿಯಾಗಿ ನಡೆಯುತ್ತಿದೆ. ತೆಲಂಗಾಣದಲ್ಲಿ ಪ್ರಸ್ತುತ ಇದು ಅನುಷ್ಠಾನಗೊಳ್ಳುತ್ತಿದೆ ಎಂದರು. ಸಿಎ ವಿದ್ಯಾರ್ಥಿಗಳಿಗೆ ಪ್ರಸ್ತುತ ಐಸಿಎಐ ವೀಡಿಯೋ ಮುದ್ರಿತ ಆನ್‌ಲೈನ್ ಕೌಡ್ ತರಗತಿಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮತ್ತು ಉಪನ್ಯಾಸಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮನನ ಮಾಡಲು ಅನುವಾಗುವಂತೆ ಐಸಿಎಐ ವರ್ಚುವಲ್ ತರಗತಿಗಳನ್ನು ಆರಂಭಿಸುತ್ತಿದೆ ಎಂದವರು ತಿಳಿಸಿದರು. ಕಾಲೇಜು ವಿದ್ಯಾರ್ಥಿಗಳಲ್ಲಿ ಜಿಎಸ್‌ಟಿ ತೆರಿಗೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಲೆಕ್ಕ ಪರಿಶೋಧಕರಿಂದ ಉಪನ್ಯಾಸಗಳನ್ನು ಆಯೋಜಿಸಲಾಗುತ್ತಿದೆ. ಜಿಎಸ್‌ಟಿ ವ್ಯವಸ್ಥೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಗಣನೀಯ ಹೆಚ್ಚಳವಾಗಿದೆ ಮತ್ತು ಸಂಗ್ರಹ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಪ್ರಮಾಣವೂ ಕಡಿಮೆಯಾಗಿದೆ ಎಂದರು.