ಹೊಸಪೇಟೆ: ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆ ಪಿಎಸ್‌ಐ ನಾಗಪ್ಪ ಸೇರಿದಂತೆ 13 ಜನರ ವಿರುದ್ಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅ ಧಿಕಾರಿಗಳ ಬಲೆಗೆ ಬಿದ್ದು ಅಮಾನತ್ತಾಗಿ ಜೈಲು ಪಾಲಾಗಿದ್ದ ಪಿಎಸ್‌ಐ ನಾಗಪ್ಪ ಅವರು ಇತ್ತೀಚಿಗಷ್ಟೆ ಜೈಲಿನಿಂದ ಬಿಡುಗಡೆ ಹೊಂದಿದ್ದರು.
ಜೈಲಿನಿಂದ ಬಿಡುಗಡೆಗೊಂಡ ಅವರಿಗೆ ಮೆರವಣಿಗೆ ಮೂಲಕ ಅದ್ಧೂರಿ ಸ್ವಾಗತ ಕೋರಲಾಗಿತ್ತು. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ಪಿಎಸ್‌ಐ ನಾಗಪ್ಪ ಸೇರಿದಂತೆ 13 ಜನರ ವಿರುದ್ಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೂಡ್ಲಿಗಿ ಪೊಲೀಸ್ ಠಾಣೆಯ ಸಿಪಿಐ ವಸಂತ್ ಅಸೋಧೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಾ| ಅರುಣ್ ತಿಳಿಸಿದ್ದಾರೆ.