Advertisement

Bengaluru: ಅಕ್ರಮವಾಗಿ ವಿದೇಶಿಗರಿಗೆ ಮನೆ ಬಾಡಿಗೆಗೆ ನೀಡಿದ 20 ಮಾಲಿಕರ ವಿರುದ್ಧ ಪ್ರಕರಣ

11:16 AM Jun 12, 2024 | Team Udayavani |

ಬೆಂಗಳೂರು: ವಿದೇಶಿ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ನೀಡಿದ್ದ 20 ಮಂದಿ ಮನೆ ಮಾಲಿಕರ ವಿರುದ್ಧ ವಿದೇಶಿಯರ ಕಾಯ್ದೆಯಡಿ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಸಿಸಿಬಿ ಘಟಕದ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿ ತಂಡವು ಇತ್ತೀಚೆಗೆ ನಗರದ ಬಾಣಸವಾಡಿ, ರಾಮಮೂರ್ತಿ ನಗರ, ಕೆ.ಆರ್‌.ಪುರ, ಸೋಲದೇವನಹಳ್ಳಿ, ಬಾಗಲಗುಂಟೆ, ಕಾಡುಗೋಡಿ, ಬೇಗೂರು, ಬೊಮನಹಳ್ಳಿ, ಪರಪ್ಪನ ಅಗ್ರಹಾರ, ವಿದ್ಯಾರಣ್ಯಪುರ ಹಾಗೂ ಚಿಕ್ಕಜಾಲ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿತ್ತು. ಆ ಸಂದರ್ಭದಲ್ಲಿ ವಿದೇಶಿಯರ ಕಾಯ್ದೆ ನಿಯಮ ಗಳನ್ನು ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆಗೆ ನೀಡಿದ್ದ 20 ಮಂದಿ ಮಾಲಿಕರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಸಿಬಿ ಪೊಲೀಸರು ಪ್ರಕರಣ ದಾಖಲಸಿದ್ದೇಕೆ?: ಮನೆ ಮಾಲಿಕ ಯಾವುದೇ ವಿದೇಶಿ ಪ್ರಜೆಗಳಿಗೆ ತನ್ನ ಮನೆಯನ್ನು ಬಾಡಿಗೆಗೆ ನೀಡಿದ 24 ಗಂಟೆಯೊಳಗೆ ವಿದೇಶಿಯರ ನೋಂದಣಿ ಇಲಾಖೆಯ ಆನ್‌ಲೈನ್‌ ಪೋರ್ಟಲ್‌ ಮೂಲಕ ಫಾರಂ-ಸಿ ನಮೂನೆಯನ್ನು ಎಫ್ಆರ್‌ಆರ್‌ಒ ಅಧಿಕಾರಿಗಳಿಗೆ ಸಲ್ಲಿಸಬೇಕು. ಆದರೆ, ಮನೆ ಮಾಲಿಕರು ಈ ನಿಯಮಗಳನ್ನು ಪಾಲಿಸದೇ 2023-24ನೇ ಸಾಲಿನಲ್ಲಿ ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆ ನೀಡಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಈ ಮನೆಗಳನ್ನು ಬಾಡಿಗೆಗೆ ಪಡೆದಿದ್ದ ವಿದೇಶಿ ಪ್ರಜೆಗಳ ಪೈಕಿ ಅನೇಕರು ಡ್ರಗ್‌ ಪೆಡ್ಲಿಂಗ್‌ ಸೇರಿ ವಿವಿಧ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘಿಸಿ ವಿದೇಶಿಗರಿಗೆ ಮನೆ ಬಾಡಿಗೆಗೆ ನೀಡಿರುವವರನ್ನು ಪತ್ತೆ ಹಚ್ಚಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next